ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು…

ಮೈಸೂರು,ಜು,2,2020(www.justkannada.in): ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

ಎಚ್.ಡಿ.ಕೋಟೆಯ ಆಲನಹಳ್ಳಿ ಗ್ರಾಮದ ಕೆರೆಯಲ್ಲಿ ಈ ಅವಘಡ ಸಂಭವಿಸಿದೆ. ಆಲನಹಳ್ಳಿ ಗ್ರಾಮದ ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ. 11ವರ್ಷದ ಪ್ರೀತಂ ಮತ್ತು 12ವರ್ಷದ ಅರ್ಜುನ್ ಮೃತಪಟ್ಟವರು. ‌ಇನ್ನು ಮೃತದೇಹಗಳ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಕುರಿತು ಎಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ದಾಖಲಾಗಿದೆ.

Key words:  mysore- HD kote-boys -swimming -death