Sunday, August 2, 2026

BDA Apartments

Home Front Page ಕಾಂಗ್ರೆಸ್​​ ನಲ್ಲಿ ನೀವು ಯಾರು? ಅಲ್ಲಿ ನೀವು ವಲಸಿಗರು ಅಲ್ವಾ? ಸಿಎಂ ಸಿದ್ದರಾಮಯ್ಯಗೆ ಹೆಚ್ ಡಿಕೆ...

ಕಾಂಗ್ರೆಸ್​​ ನಲ್ಲಿ ನೀವು ಯಾರು? ಅಲ್ಲಿ ನೀವು ವಲಸಿಗರು ಅಲ್ವಾ? ಸಿಎಂ ಸಿದ್ದರಾಮಯ್ಯಗೆ ಹೆಚ್ ಡಿಕೆ ಟಾಂಗ್.

ಮೈಸೂರು, ಮಾರ್ಚ್,.28,2024 (www.justkannada.in):  ನನ್ನನ್ನು ವಲಸಿಗ ಎಂದು ಹೇಳಿದ್ದಾರೆ. ಆದರೆ, ಕಾಂಗ್ರೆಸ್​​ನಲ್ಲಿ ನೀವು ಯಾರು? ಅಲ್ಲಿ ನೀವು ವಲಸಿಗರು ಅಲ್ವಾ? ಮೂಲ ಕಾಂಗ್ರೆಸ್ಸಿಗರನ್ನು ಕಸದಬುಟ್ಟಿಗೆ ಹಾಕಿ ಅಧಿಕಾರ ಮಾಡುತ್ತಿಲ್ಲವಾ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ಕೊಟ್ಟರು.

ಮಗನನ್ನ ಗೆಲ್ಲಿಸಿಕೊಳ್ಳಲು ಆಗಲಿಲ್ಲ. ಹೆಚ್.ಡಿಕೆ ಮಂಡ್ಯದಲ್ಲಿ ಸೋಲುತ್ತಾರೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಸಿಎಂ ಸ್ಥಾನದಲ್ಲಿದ್ದುಕೊಂಡು ಅಧಿಕಾರ ನಡೆಸೋದು ಬಿಟ್ಟು ನನ್ನ ಸೋಲಿನ ಬಗ್ಗೆ ಹೇಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವಾಗ ಜ್ಯೋತಿಷಿಯಾದರು ಎಂದು ಕಿಡಿಕಾರಿದರು.

ಮಗನನ್ನು ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂದು ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಮಗನ ಸೋಲಿಗೆ ಈ ಮಹಾನುಭಾವರು ಎಷ್ಟು ಕಾರಣ ಎಂಬುದು ಗೊತ್ತಿದೆ. ಅದರ ಆಧಾರದ ಮೇಲೆ ಇವರು ಈಗ ಮಾತನಾಡುತ್ತಿದ್ದಾರೆ. ಎಲ್ಲದಕ್ಕೂ ಜನರು ಉತ್ತರ ಕೊಡುತ್ತಾರೆ  ಎಂದು ವಾಗ್ದಾಳಿ ನಡೆಸಿದರು.

ನಾನು ಕನ್ನಡಿಗ ಎಲ್ಲಿ ಬೇಕಾದರೂ ನಾನು ಸ್ಪರ್ಧೆ ಮಾಡಬಹುದು. ಈ ಬಾರಿ ಮಂಡ್ಯದಲ್ಲಿ ಹಳೆಯ ಸ್ನೇಹಿತರ ಜೊತೆ ಸ್ಪರ್ಧೆ ಎದುರಿಸಬೇಕು. ಸ್ನೇಹಿತರ ಎದುರು ಸ್ಪರ್ಧೆಗಿಳಿಯುತ್ತಿರುವುದು ನನ್ನ ಹಣೆಬರಹ ಎಂದರು.

Key words: mysore, HD Kumaraswamy,  Siddaramaiah