Saturday, September 12, 2026

BDA Apartments

ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ ...
Home Front Page ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ

ರಾಜ್ಯ ಬಜೆಟ್: ಮೈಸೂರು ಜಯದೇವ ಆಸ್ಪತ್ರೆ ಉನ್ನತೀಕರಣಕ್ಕೆ 180 ಕೋಟಿ ರೂ. ಅನುದಾನ

ಮೈಸೂರು,ಮಾರ್ಚ್,6,2026 (www.justkannda.in):  ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು 180 ಕೋಟಿ ರೂ.ಗಳ ಅನುದಾನ ಮೀಸಲಿಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ,  ಜನ ಸಂಖ್ಯೆ ಮತ್ತು ಬೇಡಿಕೆಗೆ ಅನುಗುಣವಾಗಿ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಈಗಿರುವ 400 ಹಾಸಿಗೆ ಸಾಮರ್ಥ್ಯವನ್ನು 600 ಹಾಸಿಗೆಗೆ ಹೆಚ್ಚಿಸಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಲು 180 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ತಿಳಿಸಿದರು.

ಮೈಸೂರಿನಲ್ಲಿ ಏರೋಸ್ಪೇಸ್ ಕೈಗಾರಿಕೆಗಳನ್ನು ಉತ್ತೇಜಿಸಲು ಮೈಸೂರು ವಿಮಾನ ನಿಲ್ದಾಣದ ಹತ್ತಿರದಲ್ಲಿ ಏರೋಸ್ಪೇಸ್ ಪಾರ್ಕ್ ಅನ್ನು KIADB ವತಿಯಿಂದ ಅಭಿವೃದ್ಧಿಪಡಿಸಲಾಗುವುದು. ಅಲ್ಲದೆ, ಮೈಸೂರು ತಾಲೂಕಿನ ತಾಂಡವಪುರದಲ್ಲಿ ಸಿಲ್ಕ್‌ ಪಾರ್ಕ್‌ ಸ್ಥಾಪನೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: State Budget, Rs 180 crore, grant ,Mysore, Jayadeva Hospital