ಕನಕದಾಸರ ಜಯಂತೋತ್ಸವ : ಮೈಸೂರಿನಲ್ಲಿ ಬೃಹತ್ ಮೆರವಣಿಗೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಚಾಲನೆ:  ಜನಪದ ಕಲಾತಂಡಗಳು ಭಾಗಿ…

ಮೈಸೂರು,ನ,15,2019(www.justkannada.in): ಕನಕದಾಸರ 562ನೇ ಜಯಂತೋತ್ಸವ ಹಿನ್ನೆಲೆ ಮೈಸೂರಿನಲ್ಲಿ ಬೃಹತ್ ಮೆರವಣಿಗೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಚಾಲನೆ ನೀಡಿದರು.

ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನಕದಾಸ ಜಯಂತೋತ್ಸವ ಸಮಿತಿ ವತಿಯಿಂದ  ಕನಕ ಜಯಂತಿ ಆಚರಣೆ ಮಾಡಲಾಯಿತು. ನಗರದ ಕೋಟೆ ಆಂಜನೇಯ ದೇವಸ್ಥಾನದಿಂದ ಕಲಾಮಂದಿರದವರೆಗೆ ಬೃಹತ್ ಮೆರವಣಿಗೆ ಆಯೋಜಿಸಲಾಗಿತ್ತು. ಕನಕದಾಸರ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮಾಜಿ ಸಿಎಂ ಸಿದ್ಧರಾಮಯ್ಯ ಬೃಹತ್ ಮೆರವಣಿಗೆಗೆ ಚಾಲನೆ ನೀಡಿದರು. ಶಾಸಕ ಎಲ್.ನಾಗೇಂದ್ರ, ಮಾಜಿ ಶಾಸನ ಎಂ.ಸೋಮಶೇಖರ್ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.

ಬೃಹತ್ ಮೆರವಣಿಗೆಯಲ್ಲಿ ಸ್ತಬ್ಧಚಿತ್ರ, ವೀರಗಾಸೆ, ಡೊಳ್ಳು ಕುಣಿತ, ತಮಟೆ ವಾದ್ಯ, ಗೊಂಬೆ ಕುಣಿತ ಸೇರಿದಂತೆ ವಿವಿಧ ಜನಪದ ಕಲಾತಂಡಗಳು ಭಾಗಿಯಾಗಿದ್ದರು.

Key words: mysore- kanakadas jayanthi- Former CM -Siddaramaiah