ಕೆಎಸ್ ಒಯುನಲ್ಲಿ IAS ಮತ್ತು KAS ಪರೀಕ್ಷೆಗಳಿಗೆ ತರಬೇತಿ: ನೋಂದಾಯಿಸಿಕೊಳ್ಳಿ

ಮೈಸೂರು,ಜನವರಿ,21,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಐಎಎಸ್ ಮತ್ತು ಕೆಎಎಸ್  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ  ನೀಡಲಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಕರಾಮುವಿ ಕುಲಸಚಿವ ಪ್ರೊ. ನವೀನ್‌ಕುಮಾರ್ ಎಸ್.ಕೆ ಅವರು,   ಕೆಎಸ್ ಒಯು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ದಿನಾಂಕ: 28.01.2026 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944/9964760090 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.

Key words: Coaching, IAS, KAS, exams, Mysore, KSOU