ಮೈಸೂರಿನ ಕುಕ್ಕರಹಳ್ಳಿ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ…

ಮೈಸೂರು,ಫೆ,24,2020(www.justkannada.in):  ಮೈಸೂರಿನ ಕುಕ್ಕರಹಳ್ಳಿ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕುಕ್ಕರಹಳ್ಳಿ ಕೆರೆಯ ಬಳಿ ಇರುವ  ಪೈಪ್ ಲೇನ್ ನಲ್ಲಿ ಶವ ಪತ್ತೆಯಾಗಿದ್ದು, ಮೃತ ವ್ಯಕ್ತಿ ಎಚ್. ಡಿ ಕೋಟೆ ತಾಲ್ಲೂಕಿನ ಹಾದನೂರು ಗ್ರಾಮದ ಮಹೇಶ್ ಎಂದು ಗುರುತಿಸಲಾಗಿದೆ. ಮೃತ ಮಹೇಶ್ ಬೆಂಗಳೂರಿನಲ್ಲಿ ಫಾರೆಸ್ಟ್ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸ್ಥಳಕ್ಕೆ ಜಯಲಕ್ಷ್ಮಿಪುರಂ ಠಾಣಾ  ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದು ಮೃತದೇಹವನ್ನು ಕೆ.ಆರ್.ಆಸ್ಪತ್ರೆಗೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ‌.

Key words: mysore-Kukkarahalli lake- dead Body- found