ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಿಂಪಡೆಯದಿದ್ದರೇ ‘ಕರಾಳ ಸ್ವತಂತ್ರ ದಿನಾಚರಣೆ’: ಪ್ರತಿಭಟನೆ ನಡೆಸಿ ರೈತರಿಂದ ಸರ್ಕಾರಕ್ಕೆ ಎಚ್ಚರಿಕೆ…

ಮೈಸೂರು,ಜು,21,2020(www.justkannada.in): ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರೈತ ವಿರೋಧಿ ಕಾಯ್ದೆಯಾಗಿದ್ದು ಅದನ್ನ ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೇ ಕರಾಳ ಸ್ವತಂತ್ರ ದಿನಾಚಾರಣೆ ಆಚರಣೆ ಮಾಡಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರೈತ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.jk-logo-justkannada-logo

ಭೂಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದಲ್ಲಿ  ಪ್ರತಿಭಟನೆ ನಡೆಯಿತು. ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಕಾಯ್ದೆ ರಾಜ್ಯ ಪತ್ರ ಸುಟ್ಟು ಸರ್ಕಾರದ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಭೂಸುಧಾರಣಾ ಕಾಯ್ದೆ ತಿದ್ದುಪಡಿ ರೈತ ವಿರೋಧಿಯಾಗಿದೆ. ಮತ್ತೆ ತಾಂಡವಪುರ,ಹರಕನಹಳ್ಳಿ ಗ್ರಾಮದಲ್ಲಿ 2006 ಕೆಐಡಿಪಿ ನೂರಾರು ಮನೆ, ಮಠಗಳನ್ನು ಭೂಸ್ವಾಧೀನ ಮಾಡಲು ಹೊರಟಿದೆ. ತಿದ್ದುಪಡಿ ಹಿಂಪಡೆಯ ಬೇಕು. ಇಲ್ಲವಾದ್ದಲ್ಲಿ ಸರ್ಕಾರ ಎಚ್ಚೆತ್ತುಕೊಳ್ಳದೇ ಹೋದರೆ ಕರಾಳ ಸ್ವತಂತ್ರ ದಿನಾಚರಣೆ ಆಚರಿಸಲಿದ್ದೇವೆ ಎಂದು  ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್,ಮಂಜು ಕಿರಣ್ ಎಚ್ಚರಿಕೆ ನೀಡಿದರು.mysore-land-reform-act-protests-warnings-farmers

ಕಾಯ್ದೆಯಲ್ಲಿ ತಂದಿರುವ ತಿದ್ದುಪಡಿಯನ್ನು ಸರ್ಕಾರ ಕೂಡಲೇ ಕೈ ಬೀಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಅನ್ನದಾತರು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಘು ಹಿಮ್ಮಾವು ಮತ್ತು ಮಾಧ್ಯಮ ಕಾರ್ಯದರ್ಶಿ ,ಪ್ರತಾಪ್,ನವೀನ್ ಸೇರಿದಂತೆ ಅನೇಕ ರೈತ ಮುಖಂಡರು ಭಾಗಿಯಾಗಿದ್ದರು.

Key words: mysore- Land Reform Act – Protests – warnings – farmers