ಮೈಸೂರು: ಏಕಕಾಲಕ್ಕೆ ಹತ್ತು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಮೈಸೂರು,ಜುಲೈ,25,2025 (www.justkannada.in): ಇ- ಸ್ವತ್ತು, ಇ- ಖಾತೆ ಮಾಡಿಕೊಡಲು ಲಂಚ ಕೇಳುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಏಕಕಾಲಕ್ಕೆ ಹತ್ತು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಮೈಸೂರಿನಲ್ಲಿ ಇ- ಸ್ವತ್ತು ಕೊಡಲು ಅಧಿಕಾರಿಗಳು ಸತಾಯಿಸುತ್ತಿದ್ದು, ಜನರಿಂದ ಹಣ ಸುಲಿಗೆಗೆ ಇಳಿದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ  ಹೂಟಗಳ್ಳಿ ಪಂಚಾಯತ್, ಬೋಗಾದಿ ಪಂಚಾಯತ್, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ,  ಶ್ರೀರಾಂಪುರ ಪಟ್ಟಣ ಪಂಚಾಯಿತಿ, ಕಡಕೊಳ ಪಟ್ಟಣ ಪಂಚಾಯಿತಿ ಹಾಗೂ ವಲಯ ಕಚೇರಿ 2, 3 , 7, 8, 9 ರಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ವಿವಿಧ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು

ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ದಾಳಿಯಾಗಿದ್ದು, ಎಲ್ಲಾ ಕಚೇರಿಗಳ ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯ್ತಿ ಕಾರ್ಯ‌ನಿರ್ವಾಹಕ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆ, ಕಡತಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.vtu

Key words: Mysore,  Lokayukta, raids, inspects