Sunday, September 20, 2026

BDA Apartments

Home Front Page ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ: ಕೋವಿಡ್ ಸ್ಪಂದನೆಗಾಗಿ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ...

ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ: ಕೋವಿಡ್ ಸ್ಪಂದನೆಗಾಗಿ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಸ್ ಟಿ ಸೋಮಶೇಖರ್…

ಮೈಸೂರು,ಅಕ್ಟೋಬರ್,2,2020(www.justkannada.in):  ಕೋವಿಡ್ 19 ರ ಅಂಗವಾಗಿ ಮೈಸೂರು ವಿಭಾಗದಲ್ಲಿ ಆರ್ಥಿಕ ಸ್ಪಂದನಕ್ಕೆ ಇಂದು ಸಹಕಾರ ಇಲಾಖೆ ಮೂಲಕ ಚಾಲನೆ ನೀಡುತ್ತಿದ್ದೇವೆ. ಇದರ ವ್ಯಾಪ್ತಿಗೆ 8 ಜಿಲ್ಲೆಗಳು ಬರಲಿದ್ದು, ರೈತರು, ಸಣ್ಣ ರೈತರು, ಉದ್ದಿಮೆದಾರರು, ವ್ಯಾಪಾರಸ್ಥರು ಹೀಗೆ ಹಲವು ವಿಭಾಗಗಳಲ್ಲಿ ಸಾಲ ನೀಡಲಾಗುತ್ತದೆ. ಇದಕ್ಕೋಸ್ಕರ 8600 ಕೋಟಿ ರೂಪಾಯಿಯನ್ನು ನಿಗದಿಪಡಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.

ರಾಷ್ಟ್ರಪಿತ ಗಾಂಧೀಜಿ ಅವರ 151ನೇ ಜನ್ಮದಿನದ ಪ್ರಯುಕ್ತ ಗಾಂಧಿಜಿ ಪ್ರತಿಮೆಗೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾಲಾರ್ಪಣೆ ಮಾಡಿದರು. ಜಿಲ್ಲಾಧಿಕಾರಿಗಳಾದ ರೋಹಿಣಿ ಸಿಂಧೂರಿ, ಶಾಸಕರಾದ ಎಸ್.ಎ.ರಾಮದಾಸ್,  ಎಲ್.ನಾಗೇಂದ್ರ, ಮೇಯರ್ ತಸ್ನಿಂ, ಪಾಲಿಕೆ ಆಯುಕ್ತರಾದ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.mysore-mahatma-gandhi-jayanthi-minister-st-somashekhar-economic-response-program-covid

ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್,  ಬೆಂಗಳೂರಿನಲ್ಲಿ ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ಕೊಡಲಾಗಿದೆ. ಒಟ್ಟು ನಾಲ್ಕು ವಿಭಾಗಗಳ ಮೂಲಕ 39 ಸಾವಿರ ಕೋಟಿ ರೂಪಾಯಿ ಸಾಲವನ್ನು ನೀಡಲಾಗುತ್ತದೆ ಎಂದು ತಿಳಿಸಿದರು.

ಮೈಸೂರು ಪಾಲಿಕೆ ಮೇಲ್ದರ್ಜೆಗೇರಿಸುವ ಕುರಿತು ಸಭೆ ಕರೆದು ತೀರ್ಮಾನ-ಸಚಿವ ಎಸ್.ಟಿ ಸೋಮಶೇಖರ್

ಮೈಸೂರನ್ನು ಮಹಾನಗರ ಪಾಲಿಕೆ ಮಾಡಬೇಕು ಎಂಬ ಬೇಡಿಕೆ ಇದೆ. ಹೀಗಾಗಿ ಇಲ್ಲಿನ ಶಾಸಕರು ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ಸೇರಿಸಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. 8 ಗ್ರಾಮ ಪಂಚಾಯಿತಿ ಗಳಿಗೆ ಅರ್ಹತೆ ಇದೆ. ಜನಸಂಖ್ಯೆ ಆಧಾರದ ಮೇಲೆ ಮಹಾನಗರ ಪಾಲಿಕೆಯಾಗಿ ಪರಿವರ್ತಿಸಬೇಕೇ ಎಂಬ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

 ಡಿಸಿ ವರ್ಗಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ

ಮೈಸೂರು ಜಿಲ್ಲಾಧಿಕಾರಿಗಳ ವರ್ಗಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಎಸ್.ಟಿ ಸೋಮಶೇಖರ್, ಜಿಲ್ಲಾಧಿಕಾರಿಗಳ ವರ್ಗಾವಣೆಯಲ್ಲಿ ಯಾವುದೇ ಗೊಂದಲ ಇಲ್ಲ. ಇದು ಸರ್ಕಾರದ ನಿರ್ಧಾರವಾಗಿದ್ದು, ನಾವು ಆ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಈಗಿನ ಜಿಲ್ಲಾಧಿಕಾರಿಗಳೂ ಸಹ ಕರ್ನಾಟಕದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಕನ್ನಡಿಗರೇ ಬೇಕು ಎಂದು ಐಎಎಸ್ ಅಧಿಕಾರಿಗಳ ವಿಷಯದಲ್ಲಿ ಹೇಳಲಾಗದು ಎಂದು ಸಚಿವರಾದ ಸೋಮಶೇಖರ್ ಹೇಳಿದರು.mysore-mahatma-gandhi-jayanthi-minister-st-somashekhar-economic-response-program-covid

ರಾಜರಾಜೇಶ್ವರಿ ಕ್ಷೇತ್ರದಲ್ಲಿ ಮುನಿರತ್ನ ಅವರಿಗೆ ಟಿಕೆಟ್ ನೀಡುವ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಅವರಿಗೇ ಬಿಜೆಪಿ ಟಿಕೆಟ್ ನೀಡಬೇಕೆಂದು ನಾವು ಮನವಿ ಮಾಡಿದ್ದೇವೆ. ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಬಿಜೆಪಿಯಲ್ಲಿ ಎರಡು ಅಭ್ಯರ್ಥಿಗಳ ಹೆಸರು ಕೇಳಿಬರುವುದು ಸಹಜ. ಹಿಂದಿನ ಪರಾಜಿತ ಅಭ್ಯರ್ಥಿಯನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ಈ ಬಗ್ಗೆ ಪಕ್ಷದಲ್ಲಿ ತೀರ್ಮಾನವಾಗುತ್ತದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

Key words: mysore- Mahatma Gandhi jayanthi-Minister- ST Somashekhar-Economic Response -Program -covid.