Tuesday, October 27, 2026

Dasara Wishes

Sting operation DasraWishes_JK DasraWishes JK
Happy Dasara
Home Front Page ಮಹಿಷಾ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ.

ಮಹಿಷಾ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ.

ಮೈಸೂರು,ಅಕ್ಟೋಬರ್,10,2023(www.justkannada.in): ಮಹಿಷಾ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಿಸಿ ಮೈಸೂರು ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶಿಸಿದ್ದಾರೆ.

ಎರಡು ಕಾರ್ಯಕ್ರಮಗಳಿಗೂ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಈ ಮೂಲಕ ಮಹಿಷಾ ದಸರಾ ಮತ್ತು  ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮಗಳಿಗೆ ಬ್ರೇಕ್ ಬಿದ್ದಿದೆ.

13/10/2023 ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಅನುಮತಿ ಕೋರಿತ್ತು. ಬೆಳಗ್ಗೆ 9.30 ಕ್ಕೆ  ಮಹಿಷನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ಮುಖ್ಯದ್ವಾರ ತಾವರೆಕಟ್ಟೆ ಬಳಿಯಿಂದ ಮೃಗಾಲಯ ರಸ್ತೆ ಮೂಲಕ ಮೆರವಣಿಗೆ ಮೂಲಕ ಪುರಭವನದ ಅಂಬೇಡ್ಕರ್ ಪುತ್ಥಳಿಗೆ  ಮಾಲಾರ್ಪಣೆ ಮಾಡಿ, ಅದೇ ಆವರಣದಲ್ಲಿ ವೇದಿಕೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸಂಬಂಧ ಪೊಲೀಸ್ ಅನುಮತಿ ನೀಡುವಂತೆ ಮಹಿಷ ದಸರಾ ಸಮಿತಿ ಮನವಿ ಮಾಡಿತ್ತು.ಮಹಿಷಾ ದಸರಾ, ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನಿರಾಕರಣೆ ramesh b

ಮತ್ತೊಂದೆಡೆ ಭಾರತೀಯ ಜನತಾ ಪಾರ್ಟಿ ಮಹಿಷಾ ದಸರಾ ಆಚರಣೆ ವಿರೋಧಿಸಿ 13/10/2023 ರಂದು ಬೆಳಗ್ಗೆ 8-00 ಗಂಟೆಗೆ ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮ ಹಮ್ಮಿಕೊಳ್ಳಲು ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮುಖೇನ ಹತ್ತುವುದು ಹಾಗೂ ವಾಹನಗಳಲ್ಲಿ ರಸ್ತೆಯ ಮುಖಾಂತರ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ಬೆಟ್ಟದಲ್ಲಿ ಚಲೋ-ಚಾಮುಂಡಿ ಬೆಟ್ಟ ಕಾರ್ಯಕ್ರಮದ ಮೂಲಕ ಮಹಿಷಾದಸರಾ ತಡೆಯಲು  ಪೊಲೀಸ್ ಅನುಮತಿ ನೀಡುವಂತೆ ಮನವಿ ಮಾಡಲಾಗಿತ್ತು.

ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಅನುಮತಿ ನಿರಾಕರಣೆ ಮಾಡಲಾಗಿದೆ

ಮೇಲ್ಕಂಡ ಎರಡೂ ಕಾರ್ಯಕ್ರಮಗಳಗೆ ಅನುಮತಿ ನೀಡಿದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಇರುವುದರಿಂದ ಎರಡು ಕಾರ್ಯಕ್ರಮಗಳಿಗೆ  ಪೊಲೀಸ್ ಅನುಮತಿಯನ್ನು ನಿರಾಕರಣೆ ಮಾಡಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಅಯುಕ್ತ ಬಿ.ರಮೇಶ್‌ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

Key words: mysore- Mahisha Dasara Chamundi Betta Chalo-not-given- permission