ಮೈಸೂರು,ಏಪ್ರಿಲ್,29,2021(www.justkannada.in):  ಕುಡಿತದ ಚಟಕ್ಕೆ ದಾಸನಾಗಿದ್ದ ವ್ಯಕ್ತಿಯೋರ್ವ ತನ್ನ  ತಾಯಿ, ಪತ್ನಿ ಮತ್ತು ಇಬ್ಬರು ಮಕ್ಕಳನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ  ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಸರಗೂರು ತಾಲೂಕಿನ ಚಾಮೇಗೌಡನ ಹುಂಡಿಯಲ್ಲಿ ಈ ಘಟನೆ ನಡೆದಿದೆ. ಮಣಿಕಂಠಸ್ವಾಮಿ ಎಂಬಾತನೇ ಈ ಕೃತ್ಯವೆಸಗಿದ್ದಾನೆ. ತಾಯಿ  ಕೆಂಪಾಜಮ್ಮ (60), ಗರ್ಭಿಣಿ ಪತ್ನಿ ಗಂಗಾ(28), ಇಬ್ಬರು ಗಂಡು ಮಕ್ಕಳಾದ ರೋಹಿತ್ (ಒಂದುವರೆ ವರ್ಷ) ಮತ್ತು ಸಾಮ್ರಾಟ್ (4) ಮೃತಪಟ್ಟವರು.
ಮದ್ಯ ವ್ಯಸನಿಯಾಗಿದ್ದ ಮಣಿಕಂಠ ನಾಲ್ವರನ್ನೂ ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿ ಮಣಿಕಂಠ ತಲೆ ಮರೆಸಿಕೊಂಡಿದ್ದು, ಘಟನಾಸ್ಥಳಕ್ಕೆ ಸರಗೂರು ಪಿಎಸ್ ಐ ದಿವ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: mysore- man -killed – wife – mother-children
            





