ಮೈಸೂರು,ಡಿಸೆಂಬರ್,13,2025 (www.justkannada.in): ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರದಲ್ಲಿ ನಡೆದಿದೆ.
ಟಿ ನರಸೀಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಹಳೆ ತಿರುಮಕೂಡಲಿನ ವಿನೋದ್ (32) ಹತ್ಯೆಯಾದ ವ್ಯಕ್ತಿ . ದುಷ್ಕರ್ಮಿಗಳು ಮಚ್ಚು ಲಾಂಗುಗಳಿಂದ ಹಲ್ಲೆ ನಡೆಸಿ ವಿನೋದ್ ಎಂಬುವವರನ್ನ ಹತ್ಯೆಗೈದು ಪರಾರಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಟಿ ನರಸಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೊಲೆ ಮಾಡಿ ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Key words: Mysore, Man, attacked, murdered







