ಮೈಸೂರು ವೈದ್ಯಕೀಯ ಸಂಶೋಧನಾಲಯದ ಡೀನ್‌ ‌ಗೆ  ಆರೋಗ್ಯ ಸಚಿವ ಸುಧಾಕರ್ ವಾರ್ನಿಂಗ್…

ಮೈಸೂರು,ಏಪ್ರಿಲ್,22,2021(www.justkannada.in): ಜಿಲ್ಲಾ ಕೋವಿಡ್ ಆಸ್ಪತ್ರೆ ಜೊತೆ ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಿ. ಇಲ್ಲವಾದರೆ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ. ಇದು  ಮೈಸೂರು ವೈದ್ಯಕೀಯ ಸಂಶೋಧನಾಲಯದ ಡೀನ್‌ ನಂಜರಾಜ ಅರಸ್ ಅವರಿಗೆ  ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೊಟ್ಟ ವಾರ್ನಿಂಗ್..jk

ಮೈಸೂರಿನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ  ಇಂದು ಆರೋಗ್ಯ ಸಚಿವ ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಭೇಟಿ ನೀಡಿ ಆಸ್ಪತ್ರೆಯ ಸ್ಥಿತಿಗತಿ ಅವಲೋಕಿಸಿದರು.  ಈ ವೇಳೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗಳು  ಸಾಥ್ ನೀಡಿದರು.mysore-medical-research-institute-dean-health-minister-sudhakar-warning

ಕೋವಿಡ್ ಆಸ್ಪತ್ರೆಗೆ ಭೇಟಿ ವೇಳೆ ಮೈಸೂರು ವೈದ್ಯಕೀಯ ಸಂಶೋಧನಾಲಯದ ಡೀನ್ ನಂಜರಾಜ ಅರಸ್ ಅವರಿಗೆ ಸಚಿವ ಡಾ.ಕೆ.ಸುಧಾಕರ್ ಗೆ ಎಚ್ಚರಿಕೆ ನೀಡಿದ ಘಟನೆ ನಡೆಯಿತು.  ಹೌದು, ಜಿಲ್ಲಾ ಕೋವಿಡ್ ಆಸ್ಪತ್ರೆ ಜೊತೆ ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡಿ. ಇಲ್ಲವಾದರೆ ನಿಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ. ನಿಮ್ಮ ಭಿನ್ನಾಭಿಪ್ರಾಯಗಳನ್ನು ಕೆಲಸದಲ್ಲಿ  ತೋರಿಸಬೇಡಿ. ಅದನ್ನು ನಾನು ಸಹಿಸಲು ಸಾಧ್ಯವಿಲ್ಲ ಇನ್ಮುಂದೆ ಈ ರೀತಿ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ವಾರ್ನಿಂಗ್ ನೀಡಿದರು.

Key words: Mysore -Medical Research Institute  -Dean -Health Minister -Sudhakar -Warning.