ಮೈಸೂರು,ಜನವರಿ,30,2026 (www.justkannada.in): ಮೈಸೂರಿನಲ್ಲಿ ಎನ್ ಸಿಬಿ ಅಧಿಕಾರಿ ದಾಳಿ ವಿಚಾರ ಸಂಬಂಧ ಇದು ಫಾಲೋ ಅಫ್ ಕೇಸ್ ಅಷ್ಟೇ. ಇಲ್ಲಿ ಯಾವ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳು ಇಲ್ಲಿ ಸಿಕ್ಕಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಫಿನಾಯಿಲ್ ತಯಾರು ಮಾಡುವ ಫ್ಯಾಕ್ಟರಿ ಅದು. ಡ್ರಗ್ಸ್ ಸಂಬಂಧಪಟ್ಟ ಯಾವ ಮೆಟಿರಿಯಲ್ಸ್ ಇಲ್ಲಿ ಸಿಕ್ಕಿಲ್ಲ. ಅಲ್ಲಿ ಸಿಕ್ಕ ಆರೋಪಿಗಳ ಸಂಬಂಧಿಕರು ಇಲ್ಲಿದ್ದಾರೆ. ಹೀಗಾಗಿ ವಿಚಾರಣೆ ಮಾಡಿದ್ದಾರೆ. ಇಲ್ಲಿ ಯಾರನ್ನು ಸಹ ವಶಕ್ಕೆ ಪಡೆದಿಲ್ಲ ಎಂದು ಹೇಳಿದರು.
ಸಚಿವ ಕೆ.ಜೆ ಜಾರ್ಜ್ ರಾಜೀನಾಮೆ ಕೊಡಲು ಮುಂದಾದ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಬೇರೆ ಬೇರೆ ಕಾರಣಕ್ಕೆ ಕೆಲವು ಸ್ನೇಹಿತರು ಇದನ್ನ ಹಬ್ಬಿಸಿದ್ದಾರೆ. ಅಂತಹ ಘಟನೆ ನಡೆದಿಲ್ಲ. ಸ್ನೇಹಿತರು ಬಹಳಷ್ಟು ಜನ ಇದ್ದಾರೆ, ಓಲ್ಡ್ ಮತ್ತು ನ್ಯೂ ಫ್ರೆಂಡ್ಸ್ ಎಲ್ಲರೂ ಈ ರೀತಿ ಹಬ್ಬಿಸಿದ್ದಾರೆ. ಇಂತಹ ಘಟನೆ ಯಾವುದು ನಡೆದಿಲ್ಲ. ಈ ಬಗ್ಗೆ ಜಾರ್ಜ್ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಇದೆಲ್ಲಾ ಊಹಾಪೋಹಾ ಅಷ್ಟೇ ಎಂದರು.
ಪಾಕಿಸ್ತಾನ ಜಿಂದಾಬಾದ್ ಕೂಗಿದ ಪ್ರಕರಣಗಳು ಬಾಕಿ ವಿಚಾರ, ಈ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದ್ದಾರೆ. ಕೋರ್ಟ್ ನಲ್ಲಿ ಕೇಸ್ ಗಳು ನಡೆಯುತ್ತಿದೆ. ಹೀಗೆ ವಿಚಾರಣೆ ಮಾಡಿ ಎಂದು ಹೇಳಲು ಸಾಧ್ಯವಿಲ್ಲ ಎಂದರು.
ಬೆಳಗಾವಿ ಗಡಿಯಲ್ಲಿ 400 ಕೋಟಿ ದರೋಡೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಈ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ನಮ್ಮ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಇನ್ನೂ ಹೆಚ್ಚಿನ ಮಾಹಿತಿ ಎಸ್ಐಟಿ ವರದಿ ಬಂದ ನಂತರ ಗೊತ್ತಾಗಲಿದೆ ಎಂದರು.
Key words: No materials, manufacture, drugs, Mysore, Home Minister, Parameshwar







