Sunday, August 23, 2026

BDA Apartments

Home Front Page ಮುಂದಿನ ಸಿಎಂ ಹೆಚ್ ಡಿಕೆ ಎಂಬ ಚುಂಚನಗಿರಿ ಶ್ರೀಗಳ ಹೇಳಿಕೆ ಬಗ್ಗೆ ಸಚಿವ ಎಸ್.ಟಿ ಸೋಮಶೇಖರ್...

ಮುಂದಿನ ಸಿಎಂ ಹೆಚ್ ಡಿಕೆ ಎಂಬ ಚುಂಚನಗಿರಿ ಶ್ರೀಗಳ ಹೇಳಿಕೆ ಬಗ್ಗೆ ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯೆ ಹೀಗಿತ್ತು.

ಮೈಸೂರು,ಜನವರಿ,21,2022(www.justkannada.in):  ಮುಂದಿನ ಸಿಎಂ ಹೆಚ್.ಡಿ ಕುಮಾರಸ್ವಾಮಿ ಎಂಬ ಚುಂಚನಗಿರಿ ಶ್ರೀಗಳ ಹೇಳಿಕೆ ವಿಚಾರ ಕುರಿತು ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಸ್ವಾಮೀಜಿ ಯಾವ ಅರ್ಥದಲ್ಲಿ ಹೇಳಿದ್ದಾರೊ ನನಗೆ ಗೊತ್ತಿಲ್ಲ. ಅದರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ. ನಾನು ಈ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದರು.

2023ಕ್ಕೆ ನನ್ನ ಕ್ಷೇತ್ರದಿಂದ ಬಿಜೆಪಿಯಿಂದಲೇ ಸ್ಪರ್ಧೆ

ಮೂಲ ಕಾಂಗ್ರೆಸ್ಸಿಗರನ್ನ ಪಕ್ಷಕ್ಕೆ ಕರೆತರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ವಿಚಾರ‌ ಕುರಿತು ಪ್ರತಿಕ್ರಿಯಿಸಿದ ಸಚಿವ ಎಸ್.ಟಿ ಸೋಮಶೇಖರ್, ಯಾರು ಬರ್ತಾರೋ ಅವರನ್ನ ಕರೆದುಕೊಳ್ಳಲಿ‌. ೧೦೦% ನಾನು ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ಬಿಜೆಪಿಯಲ್ಲಿ ಗೌರವಯುತವಾಗಿ ನಡೆಸಿಕೊಳ್ಳುತ್ತಿದ್ದಾರೆ.  ಎಲ್ಲರನ್ನೂ ಜೊತೆಯಲ್ಲಿ ತೆಗೆದುಕೊಂಡು ಹೋಗ್ತಿದ್ದೀವಿ. 2023ಕ್ಕೆ ನನ್ನ ಕ್ಷೇತ್ರದಿಂದ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.

Key words: mysore-minister-ST Somashekar -HD-kumarswamy- CM