ಹಿಂದೂ ದೇವಾಲಯ ತೆರವು ಕ್ರಮ ಸರಿಯಿಲ್ಲ ಎಂಬ ಪ್ರತಾಪ್ ಸಿಂಹ ಹೇಳಿಕೆ ಬಗ್ಗೆ ಶಾಸಕ ಎಸ್.ಎ ರಾಮದಾಸ್ ಪ್ರತಿಕ್ರಿಯಿಸಿದ್ದು ಹೀಗೆ..?

ಮೈಸೂರು,ಸೆಪ್ಟಂಬರ್,11,2021(www.justkannada.in): ಹಿಂದೂ ದೇವಸ್ಥಾನ ತೆರವು  ಕ್ರಮ ಸರಿಯಲ್ಲ ಎಂಬ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಎಸ್.ಎ ರಾಮದಾಸ್, ಅವರ ಅಭಿಪ್ರಾಯ ಬೇರೆ, ನನ್ನ ಅಭಿಪ್ರಾಯ ಬೇರೆ. ಸುಪ್ರೀಂ ಕೋರ್ಟ್‌ ಸೂಚನೆಯಂತೆ ಕ್ರಮ ಜರುಗುತ್ತಿದೆ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ಎಸ್.ಎ ರಾಮದಾಸ್, ಹಿಂದೂ ದೇವಾಲಯಗಳನ್ನ ಏಕಾಏಕಿ ತೆರವು ಮಾಡುತ್ತಿಲ್ಲ. ಮೊದಲು ಅದನ್ನ ಉಳಿಸಿಕೊಳ್ಳುವ ಯೋಚನೆ‌ ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ ಸ್ಥಳಾಂತರಕ್ಕೆ ಚಿಂತನೆ ಇದೆ. ಇದೆರಡು ಸಾಧ್ಯವಾಗದಿದ್ದಾಗ ಅದನ್ನ ತೆರವು ಮಾಡಲಾಗುತ್ತಿದೆ. ಇದರಲ್ಲಿ ಆ ಧರ್ಮದ್ದು ಈ ಧರ್ಮದ್ದು ಎಂಬುದು ಏನು ಇಲ್ಲ ಎಂದರು.

ನಾವು ಆದಷ್ಟು ಎಲ್ಲ ಧಾರ್ಮಿಕ ಕೇಂದ್ರಗಳನ್ನು ಉಳಿಸಿಕೊಳ್ಳುವ ಸ್ಥಳಾಂತರ ಮಾಡುವ ಚಿಂತನೆ ಇದೆ. ಈ ವಿಚಾರದ ಬಗ್ಗೆ ಸಿಎಂ ಅವರ ಗಮನಕ್ಕೂ ತರುತ್ತೇನೆ. ಇದರಲ್ಲಿ ಒಂದು ಕ್ಷೇತ್ರ ಒಂದು ಧರ್ಮ ಎಂಬುವ ವಿಚಾರ ಇರುವುದಿಲ್ಲ ಎಂದು ಶಾಸಕ ಎಸ್.ಎ ರಾಮದಾಸ್ ತಿಳಿಸಿದರು.

Key words: mysore- MLA -SA Ramadas -reacts –MP-Pratap simha -Hindu Temple