ಚಿಕಿತ್ಸೆ ನಂತರ ಅಲರ್ಟ್ ಆದ ಶಾಸಕ ತನ್ವೀರ್ ಸೇಠ್: ಕ್ಷೇತ್ರದ ಅಭಿವೃದ್ಧಿ ಕುರಿತು ಅಧಿಕಾರಿಗಳ ಜತೆ ಸಭೆ…

ಮೈಸೂರು,ಫೆ,26,2020(www.justkannada.in):  ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಎನ್ ಆರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಇದೀಗ ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತೆ ಅಖಾಡಕ್ಕೆ ಇಳಿದಿದ್ದಾರೆ.

ಮೈಸೂರಿನ ಕಾರ್ಯಕ್ರಮವೊಂದರಲ್ಲಿ ದುಷ್ಕರ್ಮಿ ನಡೆಸಿದ ಕೊಲೆ ಯತ್ನದಿಂದ ಜೀವನ್ಮರಣ ಹೋರಾಟದಲ್ಲಿದ್ದ ಶಾಸಕ ತನ್ವೀರ್ ಸೇಠ್ ಚಿಕಿತ್ಸೆ ಪಡೆಯುತ್ತಿದ್ದರು. ದುಬೈಗೆ ತೆರಳಿ ಚಿಕಿತ್ಸೆ ಪಡೆದು ಕಳೆದ ಮೂರು ದಿನಗಳ ಹಿಂದಷ್ಟೇ ಮೈಸೂರಿಗೆ ವಾಪಸ್ ಆಗಿದ್ದರು.  ಹಲ್ಲೆಗೊಳಗಾಗಿದ್ದ ಹಿನ್ನೆಲೆ ಶಾಸಕ ತನ್ವೀರ್ ಸೇಠ್  ಕ್ಷೇತ್ರದಿಂದ ದೂರ ಉಳಿದಿದ್ದರು.

ಇದೀಗ ಚಿಕಿತ್ಸೆ ನಂತರ ಅಲರ್ಟ್ ಆದ ಶಾಸಕ ತನ್ವೀರ್ ಸೇಠ್ ಎನ್ ಆರ್ ಕ್ಷೇತ್ರದ ಅಭಿವೃದ್ಧಿಗಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದ್ದಾರೆ. ವಿದೇಶದಿಂದ ಮರಳಿದ ಬೆನ್ನಲ್ಲೇ ಶಾಸಕ ತನ್ವೀರ್ ಸೇಠ್ ಕ್ಷೇತ್ರದ ಅಭಿವೃದ್ಧಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ  ಕ್ಷೇತ್ರದ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಶಾಸಕ ತನ್ವೀರ್ ಸೇಠ್ ಸೂಚನೆ ನೀಡಿದರು.  ಕುಡಿಯುವ ನೀರು ಸಮಸ್ಯೆ ಬಗೆಹರಿಸಬೇಕು. ಕ್ಷೇತ್ರದ ಸಾಕಷ್ಟು ಸಮಸ್ಯೆ ಇದೆ. ಹಲ್ಲೆ ನಂತರ  ಕೆಲವು ತಿಂಗಳಿಂದ ಕ್ಷೇತ್ರದ ಸಮಸ್ಯೆ ಬಗ್ಗೆ ಗಮನ ಹರಿಸಲು ಸಾಧ್ಯವಾಗಿಲ್ಲ. ಹೀಗಾಗಿ ಜನರ ಸಮಸ್ಯೆ ಶೀಘ್ರ ಬಗೆ ಹರಿಸುವಂತೆ ಅಧಿಕಾರಿಗಳಿಗೆ ತನ್ವೀರ್ ಸೇಠ್ ಸೂಚನೆ ನೀಡಿದರು.

Key words: mysore- mla- Tanveer Sait-Meeting –officer- constituency-development.