Sunday, August 16, 2026

BDA Apartments

Home Front Page ಸಿದ್ಧರಾಮಯ್ಯ ಸೋಲಿಗೂ, ಸಮ್ಮಿಶ್ರ ಸರ್ಕಾರ ಪತನಕ್ಕೂ ಮುಹೂರ್ತ ಇಟ್ಟಿದ್ದು ಇಲ್ಲೇ: ನಾಯಕತ್ವ ಬದಲಾವಣೆ ಬಗ್ಗೆ ಹೆಚ್.ವಿಶ್ವನಾಥ್...

ಸಿದ್ಧರಾಮಯ್ಯ ಸೋಲಿಗೂ, ಸಮ್ಮಿಶ್ರ ಸರ್ಕಾರ ಪತನಕ್ಕೂ ಮುಹೂರ್ತ ಇಟ್ಟಿದ್ದು ಇಲ್ಲೇ: ನಾಯಕತ್ವ ಬದಲಾವಣೆ ಬಗ್ಗೆ ಹೆಚ್.ವಿಶ್ವನಾಥ್ ಹೇಳಿದ್ದೇನು ಗೊತ್ತೆ..?

ಮೈಸೂರು,ಜೂನ್,2,2021(www.justkannada.in):  ಶ್ರೀನಿವಾಸ್ ಪ್ರಸಾದ್ ಮನೆಯಲ್ಲಿ ಹಲವು ವಿಚಾರಕ್ಕೆ ಇಟ್ಟಿದ್ದೇವೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲಿಗೂ ಇಲ್ಲೆ ಮುಹೂರ್ತ ಇಟ್ಟಿದ್ದು. ಸಮ್ಮಿಶ್ರ ಸರ್ಕಾರ ಪತನಕ್ಕೂ ಇಲ್ಲೆ ಮುಹೂರ್ತ ಇಟ್ಟಿದ್ದು ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಹೇಳಿದರು.jk

ಇಂದು ಸಂಸದ ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡಿ ಚರ್ಚಿಸಿದ ಬಳಿಕ ಮಾತನಾಡಿದ ಎಂಎಲ್ ಸಿ ಹೆಚ್.ವಿಶ್ವನಾಥ್, ಶ್ರೀನಿವಾಸ್ ಪ್ರಸಾದ್ ಮನೆಯಲ್ಲಿ ಹಲವು ವಿಚಾರಕ್ಕೆ ಮೂಹೂರ್ತ ಇಟ್ಟಿದ್ದೇವೆ: ಯಡಿಯೂರಪ್ಪ ಸಿಎಂ ಆಗುವುದಕ್ಕೂ‌ ಮುಹೂರ್ತ ಇಟ್ಟಿದ್ದು ಇಲ್ಲೇ. ನಂತರದ ಹಲವು ಬೆಳವಣಿಗೆ ಪ್ರಸಾದ್ ಮನೆ ಸಾಕ್ಷಿ ಆಗಿದೆ. ಈಗಲೂ ಪ್ರಸಾದ್ ಭೇಟಿಯ ಜೊತೆ ರಾಜಕೀಯ ಹಾಗೂ ಜಿಲ್ಲೆಯ ವಿದ್ಯಮಾನದ ಮಾತನಾಡಿದ್ದೇವೆ. ಸದ್ಯಕ್ಕೆ ಯಾವ ವಿಚಾರಕ್ಕೆ ಮುಹೂರ್ತ ಅಂತ ಹೇಳೋಲ್ಲ. ಕಾದು ನೋಡೋಣ ಏನಾಗುತ್ತೆ ಅಂತ ಎಂದು ಮಾರ್ಮಿಕ ಹೇಳಿಕೆ ನೀಡಿದರು.

ಯಡ್ಯೂರಪ್ಪರ ಆರೋಗ್ಯ ಸರಿಯಿಲ್ಲ: ಅವರ ಆರೋಗ್ಯ ಸರಿಯಾಗಬೇಕು.

ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ಯಡಿಯೂರಪ್ಪರ ಆರೋಗ್ಯ ಸರಿಯಿಲ್ಲ. ಅವರ ಆರೋಗ್ಯ ಸರಿಯಾಗಬೇಕು. ಅದರ ಜೊತೆ ರಾಜ್ಯದ ಆಡಳಿತದ ಆರೋಗ್ಯವು ಸರಿಯಾಗಬೇಕು. ಇದಕ್ಕಾಗಿ ಹೈಕಮಾಂಡ್ ಶೀಘ್ರವೇ ಒಂದು ತೀರ್ಮಾನ ಕೈಗೊಳ್ಳಬೇಕು ಎಂದು ಪರೋಕ್ಷವಾಗಿ ನಾಯಕತ್ವ ಬದಲಾವಣೆಗೆ ಪುಷ್ಠಿ ಕೊಟ್ಟಂತೆ ಹೇಳಿಕೆ‌ ನೀಡಿದರು.school-startup-mlc-h-vishwanath-minister-suresh-kumar

ರಾಜ್ಯ ರಾಜಕಾರಣದಲ್ಲಿ ಸ್ವಲ್ಪ ಗೊಂದಲ ಇದೆ. ಕೆಲವರು ದೆಹಲಿಗೆ ಹೋಗಿದ್ದಾರೆ. ಇನ್ನು‌ ಕೆಲವರು ಹೇಳಿಕೆ‌ ಕೊಡ್ತಿದ್ದಾರೆ. ಈ ಮಧ್ಯೆ ಯಡಿಯೂರಪ್ಪನವರು ಏನೂ ಮಾತನಾಡುತ್ತಿಲ್ಲ. ಯಾರು ಏನೇ ಮಾಡಿದ್ರು ತೀರ್ಮಾನ ಮಾಡೋದು ಹೈಕಮಾಂಡ್. ಹಾಗಾಗಿ ಹೈಕಮಾಂಡ್ ಸೂಕ್ತ ತೀರ್ಮಾನ ಮಾಡುತ್ತೇ ಅಂತ ವಿಶ್ವಾಸ ಹೊಂದಿದ್ದೇವೆ ಎಂದು ತಿಳಿಸಿದರು.

Key words: mysore-MLC-H.Vishwanath-siddaramaiah-lose-muhoortha