ನವದೆಹಲಿ,ಜುಲೈ,30,2025 (www.justkannada.in): ಕರ್ನಾಟಕದಲ್ಲಿ ಪೊಲೀಸ್ ವೈಪಲ್ಯದ ಬಗ್ಗೆ ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ ್ಇಂದು ಇಂದು ಸಂಸತ್ ನಲ್ಲಿ ಗಮನ ಸೆಳೆದರು.
ಸಂಸತ್‌ನಲ್ಲಿ ಮೈಸೂರು ಡ್ರಗ್ಸ್ ಫ್ಯಾಕ್ಟರಿ ಜಾಲ ಸದ್ದು ಮಾಡಿದ್ದು ಲೋಕಸಭೆಯಲ್ಲಿ ಮಾತನಾಡಿದ ಸಂಸದ ಯದುವೀರ್ ಮೈಸೂರಲ್ಲಿ ಅನಧಿಕೃತ ಡ್ರಗ್ಸ್ ಜಾಲದ ಕುರಿತು ಕಳವಳ ವ್ಯಕ್ತಪಡಿಸಿದರು. ಪೊಲೀಸ್ ವೈಫಲ್ಯದ ಕುರಿತು ಎಳೆ ಎಳೆಯಾಗಿ ಬಿಚ್ಚಿಟ್ಟರು.
ಕರ್ನಾಟಕದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಸಾಂಸ್ಕೃತಿಕ ನಗರಿ ಎಂದು ಹೆಸರುವಾಸಿಯಾಗಿರುವ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿ 390 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಆದರೆ ಇದು ಕರ್ನಾಟಕ ಪೊಲೀಸರು ನಡೆಸಿದ್ದ ಕಾರ್ಯಾಚರಣೆಯಿಂದ ಪತ್ತೆಯಾಗಿದ್ದಲ್ಲ. ಬದಲಾಗಿ ಮಹಾರಾಷ್ಟ್ರ ಪೊಲೀಸರು ಮೈಸೂರಿಗೆ ಆಗಮಿಸಿ ಡ್ರಗ್ಸ್ ತಯಾರಿಕಾ ಘಟಕದ ದಾಳಿ ನಡೆಸಿ ಪತ್ತೆ ಹಚ್ಚಿದ್ದಾರೆ. ಇದು ನಿಜಕ್ಕೂ ಶಾಕಿಂಗ್ ವಿಚಾರ ಎಂದು ಕಳವಳ ವ್ಯಕ್ತಪಡಿಸಿದರು.
ಈ ಬಗ್ಗೆ ಗೃಹಮಂತ್ರಿಗಳಿಗೆ ಪ್ರಶ್ನಿಸಿದರೆ ಪೊಲೀಸ್ ಇಲಾಖೆ ವೈಪಲ್ಯದ ಬಗ್ಗೆ ವಿಳಂಬ ಕಾರ್ಯಾಚರಣೆ ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ. ರಾ ಹೀಗಾಗಿ ಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಹಾಗೆಯೇ ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ಆದ ದಾಳಿ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಇಂಟೆಲಿಜೆನ್ಸ್ ಫೇಲ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ ಯದುವೀರ್, ಗೃಹಸಚಿವ ಪರಮೇಶ್ವರ್ ಡ್ರಗ್ಸ್ ಸೀಜ್ ಕುರಿತು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಗುಲ್ಬರ್ಗಾದಲ್ಲಿ ಇತ್ತೀಚೆಗೆ ಡ್ರಗ್ಸ್ ಜಾಲ ಪತ್ತೆಯಾಗಿತ್ತು. ರಾಜ್ಯದ ಐಟಿ ಸಚಿವರು ಆ ಪ್ರಕರಣದಲ್ಲಿ ಇಂಟ್ರೆಸ್ಟ್ ತೋರಿಸಿದ್ದರು ಎಂದು ಯದುವೀರ್ ತಿಳಿಸಿದರು.
Key words: Mysore, MP, Yaduveer, Parliament , state police