ಮೈಸೂರು,ಅಕ್ಟೋಬರ್,10,2025 (www.justkannada.in): ಮೈಸೂರಿನಲ್ಲಿ ಇತ್ತೀಚೆಗೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಆಡಳಿತ ಕುಸಿಯುತ್ತಿದೆ. ಯಾರಿಗೂ ಭಯವಿಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆತಂಕ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಯದುವೀರ್ , ದಸರಾ ಮುಗಿದ ಬಳಿಕವೂ ಹಬ್ಬದ ವಾತಾವರಣ ಇದೆ. ಆದರೆ ಈಗ ಕಳೆದ ಎರಡು ದಿನಗಳಿಂದ ಘಟನೆಗಳು ನಡೆದಿವೆ. ಮೈಸೂರು ಇತಿಹಾಸ ಸ್ವಚ್ಛತೆ ಒಳ್ಳೆಯ ಆಡಳಿತಕ್ಕೆ ಹೆಸರುವಾಸಿಯಾಗಿದೆ. ಆದರೆ ಇತ್ತೀಚೆಗೆ ಕಾನೂನು ಆಡಳಿತ ಕುಸಿಯುತ್ತಿದೆ. ಈ ಹಿಂದೆ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಆಯಿತು. ನಂತರ 340 ಕೋಟಿ ಡ್ರಗ್ಸ್ ಪತ್ತೆಯಾಯಿತು. ಮಹಾರಾಷ್ಟ್ರ ಪೊಲೀಸರು ಇದನ್ನು ಕಂಡು ಹಿಡಿದರು. ಇದಾದ ಬಳಿಕ ಅರಮನೆ ಮುಂಭಾಗ ಮೊನ್ನೆ ಒಂದು ಕೊಲೆ ಆಗಿದೆ. ನಿನ್ನೆ ಚಿಕ್ಕ ಮಗು ಮೇಲೆ ಅತ್ಯಾಚಾರ ಕೊಲೆಯಾಗಿದೆ. ಬಲೂನ್ ಮಾರಾಟ ಮಾಡುವ ಮಗು ಮೇಲೆ ಹೀನ ಕೃತ್ಯ ಆಗಿದೆ. ಮೈಸೂರಿನಲ್ಲಿ ಇಂತಹ ಘಟನೆಗಳು ಈ ಹಿಂದೆ ಆಗಿಲ್ಲ. ನಗರದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ನಗರದ ಹೃದಯ ಭಾಗದಲ್ಲೇ ಇಂತಹ ಘಟನೆಗಳು ನಡೆದರೆ ಹೇಗೆ. ಕಿಡಿಗೇಡಿಗಳಿಗೆ ಯಾವುದೇ ರೀತಿಯ ಭಯ ಇಲ್ಲ. ಸಿಎಂ ಸಿದ್ದರಾಮಯ್ಯ ಚುನಾವಣೆಯಲ್ಲಿ ಇದು ನನ್ನ ತವರು ಅಂತಾರೆ. ಇಂತಹ ಘಟನೆಗಳನ್ನು ಆಗದಂತೆ ತಡೆಯಲು ಆಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದರು.
ದಸರಾ ಪಾಸ್ ಅವ್ಯವಸ್ಥೆ: ಸರ್ಕಾರದ ವಿರುದ್ದ ಯದುವೀರ್ ವಾಗ್ದಾಳಿ
ದಸರಾ ಪಾಸ್ ವಿಚಾರದಲ್ಲಿ ಗೊಂದಲ ಆಯಿತು. ಸಿಟ್ಟಿಂಗ್ ವ್ಯವಸ್ಥೆ ಕಡಿಮೆ ಮಾಡಿ ಪಾಸ್ ಹೆಚ್ಚು ಕೊಟ್ಟರು. ಪಾಸ್ ಇರೋರಿಗೂ ಅರಮನೆ ಒಳಗಡೆ ಬಿಡಲಿಲ್ಲ. ಇದು ಕೇವಲ ಕಾಂಗ್ರೆಸ್ ನಾಯಕರ ದಸರಾ ಆಯಿತು. ಜನ ಸಾಮಾನ್ಯರ ದಸರಾ ಆಗಲಿಲ್ಲ. ನಾಗರಿಕರಿಗೆ ಅನುಕೂಲ ಮಾಡಲಿಲ್ಲ. ಕೇವಲ ಉಳ್ಳವರ ದಸರಾ ದರ್ಬಾರ್ ಆಯಿತು ಎಂದು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಯದುವೀರ್ ವಾಗ್ದಾಳಿ ನಡೆಸಿದರು.
ಸ್ಥಳೀಯ ಚುನಾವಣೆಯ ಚುನಾವಣೆ ಆಗಿಲ್ಲ. ಸ್ಥಳೀಯ ಜನಪ್ರತಿನಿಧಿಗಳಿಗೆ ಅನ್ಯಾಯ ಆಗಿದೆ. ಪಾಲಿಕೆ ಚುನಾವಣೆ ನಡೆಸದೆ ಸರ್ಕಾರ ಕುಳಿತಿದೆ. ಕೇಂದ್ರದಿಂದ ಬಂದ ಹಣ ವಾಪಸ್ ಹೋಗಿದೆ. ಈ ರೀತಿ ಆದರೆ ಮೈಸೂರು ನಗರದ ಅಭಿವೃದ್ಧಿ ಹೇಗೆ ಸಾಧ್ಯ? ಯಾವಾಗಲೂ ಸಂವಿಧಾನ ಸಂವಿಧಾನ ಅಂತ ಹೇಳುತ್ತಾರೆ. ಆದರೆ ಸಂವಿಧಾನದ ಪ್ರಕಾರ ಆಡಳಿತ ಮಾಡುತ್ತಿಲ್ಲ. ಮೈಸೂರು ಪಾಲಿಕೆ ಶೀಘ್ರವೇ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಹೋರಾಟಕ್ಕೆ ಧುಮುಕುತ್ತದೆ ಎಂದು ಯದುವೀರ್ ಎಚ್ಚರಿಕೆ ಕೊಟ್ಟರು.
ಚುನಾವಣೆ ಸಮಯದಲ್ಲಿ ಮಾತ್ರ ಸಿಎಂಗೆ ತವರು ನೆನಪಾಗೋದು..
ಸಿಎಂ ಗೆ ಚುನಾವಣೆ ಸಮಯದಲ್ಲಿ ಮಾತ್ರ ತವರು ನೆನಪಾಗುತ್ತದೆ. ಅಧಿಕಾರಕ್ಕೆ ಬಂದ ನಂತರ ತವರು ಕ್ಷೇತ್ರವನ್ನು ಅಭಿವೃದ್ದಿ ಮಾಡಬೇಕು. ಕಾನೂನು ಸುವ್ಯವಸ್ಥೆ ಸರಿಯಾದ ರೀತಿ ಕರ್ತವ್ಯ ನಿರ್ವಹಣೆ ಮಾಡುವಂತೆ ನೋಡಿಕೊಳ್ಳಬೇಕು. ಆ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿಲ್ಲ. ವಿರೋಧ ಪಕ್ಷವಾಗಿ ನಮ್ಮ ಕೆಲಸ ಮಾಡುತ್ತಿದ್ದೇವೆ. ಜನರ ಸಮಸ್ಯೆ ಬಗ್ಗೆ ಧ್ವನಿ ಎತ್ತುತ್ತೇವೆ. ಜನರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದರು.
ಮೈಸೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಭಯನಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಯದುವೀರ್, ಚುನಾವಣೆ ಎದುರಿಸಲು ನಮಗೆ ಶಕ್ತಿ ಇದೆ. ಕಾಂಗ್ರೆಸ್ ಗೆ ಇದೆಯೋ ಇಲ್ಲವೋ ಗೊತ್ತಿಲ್ಲ. ತಂತ್ರಗಾರಿಕೆ ಏನೇ ಇದ್ದರೂ ಚುನಾವಣೆ ನಡೆಯಬೇಕು ಎಂದು ಆಗ್ರಹಿಸಿದರು.
Key words: Law and order, deteriorated, Mysore, MP Yaduveer