ಮೈಸೂರು, ಜನವರಿ, 8,2026 (www.justkannada.in): ಸಾಂಸ್ಕೃತಿಕ ನಗರಿಯಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಮೈಸೂರಿನಲ್ಲಿ ನಗರ ಪ್ರದಕ್ಷಿಣೆ ನಡೆಸಿದ ಸಂಸದ ಯದುವೀರ್ ಹಲವಾರು ಪ್ರದೇಶಗಳಲ್ಲಿ ಬೀದಿ ಬದಿ ವ್ಯಾಪಾರಿಗಳೊಂದಿಗೆ ಸಂವಾದ ನಡೆಸಿದ ನಂತರ ಮಾಹಿತಿ ನೀಡಿದರು.
ಬೀದಿ ವ್ಯಾಪಾರಿಗಳ ವಲಯಗಳು ಮುಖ್ಯವಾಗಿದ್ದು, ಇದನ್ನು ನಿರ್ಮಿಸಲು ನಾನು ಒತ್ತು ನೀಡುತ್ತೇನೆ, ಶೀಘ್ರದಲ್ಲೇ ಇತರ ಪ್ರದೇಶಗಳಿಗೂ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ಸಂಸದ ಯದುವೀರ್ ತಿಳಿಸಿದರು.
ಇದೇ ವೇಳೆ ಬೀದಿ ಬದಿ ವ್ಯಾಪಾರಿಗಳ ಜೊತೆ ಸಂಸದ ಯದುವೀರ್ ಮಾತುಕತೆ ನಡೆಸಿ ಅವರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
Key words: Priority, street vendor zone, Mysore, MP Yaduveer







