ಮೈಸೂರು,ಅಕ್ಟೋಬರ್,9,2025 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಎರಡು ದಿನಗಳ ಹಾಡ ಹಗಲೇ ವ್ಯಕ್ತಿಯೋರ್ವನನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಾಸುವ ಮುನ್ನವೇ ಇದೀಗ 10 ವರ್ಷದ ಅಪ್ರಾಪ್ತ ಬಾಲಕಿಯನ್ನ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಮೈಸೂರಿನ ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ಬಾಲಕಿಯನ್ನ ಹತ್ಯೆ ಮಾಡಲಾಗಿದೆ. ನಜರ್ ಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದೇಹದ ಮೇಲೆ ಬಟ್ಟೆಯ ಇಲ್ಲದ ರೀತಿಯಲ್ಲಿ ಶವ ಪತ್ತೆಯಾಗಿದ್ದು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆಯನ್ನು ಕುಟುಂಬಸ್ಥರು ವ್ಯಕ್ತಪಡಿಸಿದ್ದಾರೆ.
ಮೈಸೂರು ದಸರಾ ಹಿನ್ನೆಲೆಯಲ್ಲಿ ಸುಮಾರು 50 ಕ್ಕೂ ಹೆಚ್ಚು ಕುಟುಂಬಸ್ಥರು ಗುಲ್ಬರ್ಗದಿಂದ ಮೈಸೂರಿಗೆ ಬಂದಿದ್ದರು. ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿದ್ದ ಹಕ್ಕಿಪಿಕ್ಕಿ ಜನಾಂಗ ಮೈಸೂರಿನ ಅರಮನೆ ಮುಂಭಾಗದ ದೊಡ್ಡ ಕೆರೆ ಮೈದಾನದ ಬಳಿ ತಂಗಿದ್ದರು. ಈ ಮಧ್ಯೆ ನಗರದ ಚಾಮುಂಡಿ ಬೆಟ್ಟ, ವಸ್ತು ಪ್ರದರ್ಶನ, ಬನ್ನಿ ಮಂಟಪ, ದೇವರಾಜ ಮಾರುಕಟ್ಟೆ ಸೇರಿ ಹಲವು ಸ್ಥಳಗಳಲ್ಲಿ ಇವರು ವ್ಯಾಪಾರ ಮಾಡುತ್ತಿದ್ದರು.
ನಿನ್ನೆ ರಾತ್ರಿ ಸುಮಾರು 12 ಗಂಟೆವರೆಗೆ ವ್ಯಾಪಾರ ಮಾಡಿಕೊಂಡು ಬಂದಿದ್ದ ಒಂದೇ ಕುಟುಂಬದ 8 ಜನ ಒಟ್ಟಿಗೆ ಮಲಗಿದ್ದರು. ಮುಂಜಾನೆ 4 ಗಂಟೆಯಲ್ಲಿ ಮಳೆ ಬಂದಾಗ ಎಚ್ಚರವಾಗಿದ್ದು, ಆಗ ಪಕ್ಕದಲ್ಲಿ ಮಗು ಇಲ್ಲದ್ದನ್ನು ಗಮನಿಸಿದ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಮೊದಲು ನಜರ್ ಬಾದ್ ಪೊಲೀಸ್ ಠಾಣೆಗೆ ಮಿಸ್ಸಿಂಗ್ ದೂರು ನೀಡಿ ನಂತರ ಹುಟುಕಾಟ ನಡೆಸಿದ್ದು, ಬೆಳಗ್ಗಿನ ಜಾವ, 6.30ರ ಸುಮಾರಿಗೆ ಜೋಪಡಿ ಪಕ್ಕದ ಗುಂಡಿಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಶವವನ್ನ ನೋಡಿದ ಕುಟುಂಬಸ್ಥರು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಐತಿಹಾಸಿಕ ಮೈಸೂರು ದಸರಾ ಮುಗಿದ ನಂತರ ಕೇವಲ ಎರಡೇ ದಿನಗಳ ಅಂತರದಲ್ಲಿ ಒಂದೇ ಜಾಗದಲ್ಲಿ ಎರಡು ಕೊಲೆಯಾಗಿದೆ. ಎರಡು ದಿನಗಳ ಹಿಂದೆ ಇದೇ ಜಾಗದ ಮತ್ತೊಂದು ಬದಿಯಲ್ಲಿ ಗಿಲ್ಗಿ ವೆಂಕಟೇಶ್ ಎಂಬ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿತ್ತು. ಇದೀಗ ಬಾಲಕಿಯನ್ನ ಅಮಾನುಷವಾಗಿ ಹತ್ಯೆ ಮಾಡಲಾಗಿದ್ದು, ಸದ್ಯ ಪೊಲೀಸರು 50 ಕುಟುಂಬಗಳ ವಿಚಾರಣೆ ನಡೆಸುತ್ತಿದ್ದಾರೆ.
Key words: Mysore, Brutal, murder, 10-year-old girl