‘ನನಗೆ ಸೂಟ್ ಆಗತ್ತೆ. ಆದರೆ ನಾನು ಸೂಟ್ ಆಗಲ್ಲ’ ಎಂದು ಪ್ರಮೋದಾದೇವಿ ಒಡೆಯರ್ ಹೇಳಿದ್ದು ಯಾವುದಕ್ಕೆ ಗೊತ್ತಾ…?

ಮೈಸೂರು,ಜನವರಿ,2,2020(www.justkannada.in): ಇತ್ತೀಚೆಗೆ ಯದುವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ್ ಒಡೆಯರ್ ಅವರ ರಾಜಕೀಯ ಪ್ರವೇಶದ ಬಗ್ಗೆ ಊಹಾಪೂಹ ಹಬ್ಬಿತ್ತು. ಈ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿ ಈ ವಿಚಾರಕ್ಕೆ ಫುಲ್ ಸ್ಟಾಪ್ ಇಟ್ಟಿದ್ದರು.  ಇದೀಗ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರು ಸಹ ತಮ್ಮ ರಾಜಕೀಯ ಪ್ರವೇಶದ ಬಗ್ಗೆ  ಸ್ಪಷ್ಟನೆ ನೀಡಿದ್ದಾರೆ.jk-logo-justkannada-mysore

ಈ ಬಗ್ಗೆ ಇಂದು ಮೈಸೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಪ್ರಮೋದಾದೇವಿ ಒಡೆಯರ್, “ರಾಜಕೀಯ ನನಗೆ ಸೂಟ್ ಆಗತ್ತೆ. ಆದರೆ ರಾಜಕೀಯಕ್ಕೆ ನಾನು ಸೂಟ್ ಆಗಲ್ಲ. ಈ ಹಿಂದೆಯೂ ಹಲವಾರು ಬಾರಿ ಸ್ಪಷ್ಟನೆ ಕೊಟ್ಟಿದ್ದೇನು.  ಪದೇ ಪದೇ ಅದನ್ನೇ ಹೇಳೋದಿಕ್ಕೆ ಇಷ್ಟ ಇಲ್ಲ.  ಆಡಳಿತ ನಡೆಸುವುದಕ್ಕೆ ನನಗೆ ಕಷ್ಟ ಆಗಲ್ಲ.  ಆದರೆ ರಾಜಕೀಯಕ್ಕೆ ನಾನು ಸೂಟ್ ಆಗಲ್ಲ. ಹೀಗಾಗಿ ನಾನು ರಾಜಕೀಯಕ್ಕೆ ಹೋಗಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Key words: mysore-pramoda devi wodeyar-political-entray-clearify