Sunday, October 11, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Crime ಗರ್ಭಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು…..

ಗರ್ಭಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು…..

ಮೈಸೂರು,ಮಾ,8,2020(www.justkannada.in): ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು   ಗರ್ಭಿಣಿ ನೇಣಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಕಲ್ಕುಣಿಕೆಯಲ್ಲಿ ಈ ಘಟನೆ ನಡೆದಿದೆ. ಲಕ್ಣ್ಮೀ (23) ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಗರ್ಭಿಣಿ. ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಂಚಳ್ಳಿ ಗ್ರಾಮದ ನಿವಾಸಿ ಲಕ್ಷ್ಮೀ ಅವರನ್ನ 10 ತಿಂಗಳ ಹಿಂದೆ ಹುಣಸೂರಿನ ಯೋಗೇಶ್ ಜೊತೆ ಮದುವೆ ಮಾಡಿಕೊಡಲಾಗಿತ್ತು.

ಮದುವೆ ವೇಳೆ ಲಕ್ಷಾಂತರ ರೂ ವರದಕ್ಷಿಣೆ  400 ಗ್ರಾಂ ಚಿನ್ನವನ್ನ  ಲಕ್ಷ್ಮಿ ಪೋಷಕರು ನೀಡಿದ್ದರು. ಜತೆಗೆ ಒಂದು ನಿವೇಶನ ನೀಡಲು ಪೋಷಕರು ಒಪ್ಪಿಕೊಂಡಿದ್ದರು. ಆದರೆ ನಿವೇಶನ ನೀಡುವುದು ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಲಕ್ಷ್ಮಿಗೆ  ಗಂಡನ ಮನೆಯವರು ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ಗಂಡನ ಮನೆಯವರ ಕಿರುಕುಳದಿಂದ ಬೇಸತ್ತು ಲಕ್ಷ್ಮಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore- pregnant- housewife- Suicide