ಆ.29 ರಂದು ಮೈಸೂರಿನಲ್ಲಿ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ.

ಮೈಸೂರು,ಆಗಸ್ಟ್,26,2022(www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ 2022ನೇ ಸಾಲಿನ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆ.29ರಂದು (ಸೋಮವಾರ) ಬೆಳಗ್ಗೆ 11ಗಂಟೆಗೆ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸಹಕಾರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಪ್ರಶಸ್ತಿ ಪ್ರದಾನ ಮಾಡುವರು. ಮೈಸೂರು ಮಹಾನಗರ ಪಾಲಿಕೆಯ ಹಂಗಾಮಿ ಮೇಯರ್ ಸುನಂದಾ ಪಾಲನೇತ್ರ ಪ್ರತಿಭಾ ಪುರಸ್ಕಾರ ಮಾಡುವರು. ಮುಖ್ಯ ಅತಿಥಿಗಳಾಗಿ ಶಾಸಕ ಎಲ್.ನಾಗೇಂದ್ರ, ಮುಡಾ ಮಾಜಿ ಅಧ್ಯಕ್ಷರಾದ ಎಚ್.ವಿ.ರಾಜೀವ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ.ಹರೀಶ್‌ಗೌಡ, ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ, ಕಾಂಗ್ರೆಸ್ ಯುವ ಮುಖಂಡ ಸುನಿಲ್‌ ಬೋಸ್ ಪಾಲ್ಗೊಳ್ಳುವರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ಅಧ್ಯಕ್ಷತೆ ವಹಿಸುವರು.

ಇದೇ ಸಂದರ್ಭದಲ್ಲಿ ಸಂಘದಿಂದ ಕೊಡ ಮಾಡುವ ವಾರ್ಷಿಕ ಪ್ರಶಸ್ತಿ ಪ್ರದಾನ, ಹಿರಿಯ ಪತ್ರಕರ್ತರಿಗೆ ಅಭಿನಂದನೆ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದಿರುವ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ಸಂಘದ ಎಲ್ಲ ಸದಸ್ಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಎಂ  ಕೋರಿದ್ದಾರೆ.

Key words: mysore- press- club- Press Day- Annual Awards