ಬೆಂಗಳೂರು,ಸೆಪ್ಟಂಬರ್,26,2025 (www.justkannada.in): ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ, ರಿಷಭ್ ಶೆಟ್ಟಿ ನಟನೆಯ ಕಾಂತಾರ- ಚಾಪ್ಟರ್ 1 ಸಿನಿಮಾಕ್ಕೆ ಸರಕಾರಿ ಸ್ವಾಮ್ಯದ ಮತ್ತು ಮೈಸೂರು ಸ್ಯಾಂಡಲ್ ಸೋಪ್ ಖ್ಯಾತಿಯ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆಎಸ್ ಡಿಎಲ್) ಸುಗಂಧ ಭಾಗಿದಾರ (ಫ್ರ್ಯಾಗ್ರನ್ಸ್ ಪಾರ್ಟನರ್) ಆಗಿ, ಸಹ-ಪ್ರಾಯೋಜಕತ್ವ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಕನ್ನಡ ಚಿತ್ರರಂಗವು ಸ್ಯಾಂಡಲ್ ವುಡ್ ಎಂದೇ ಹೆಸರಾಗಿದೆ. ಹಾಗೆಯೇ ಕೆಎಸ್ ಡಿ ಎಲ್ ಸಂಸ್ಥೆಯು ಸ್ಯಾಂಡಲ್ ಸೋಪ್ ಮತ್ತು ಗಂಧದ ಎಣ್ಣೆಗೆ ಹೆಸರಾಗಿದೆ. ಈಗ ಸಂಸ್ಥೆ ಮತ್ತು ಸ್ಯಾಂಡಲ್ ವುಡ್ ಚಿತ್ರತಂಡದ ನಡುವೆ ಒಪ್ಪಂದ ಆಗಿದೆ. ಚಿತ್ರತಂಡವು ತನ್ನ ಪ್ರತೀ ಪ್ರದರ್ಶನದಲ್ಲೂ ಕೆಎಸ್ ಡಿಎಲ್ ಉತ್ಪನ್ನಗಳಿಗೆ ಪ್ರಚಾರ ನೀಡಲಿದೆ ಎಂದಿದ್ದಾರೆ.
ಕನ್ನಡ, ತೆಲುಗು, ಹಿಂದಿ, ತಮಿಳು, ಮಲೆಯಾಳಂ, ಇಂಗ್ಲಿಷ್ ಅಲ್ಲದೆ ಸ್ಪ್ಯಾನಿಷ್ ಹೀಗೆ 7 ಭಾಷೆಗಳಲ್ಲಿ ಕಾಂತಾರ ತೆರೆ ಕಾಣಲಿದೆ. ಭಾರತದ 7,000 ಹಾಗೂ 30 ರಾಷ್ಟ್ರಗಳ 6,500ಕ್ಕೂ ಹೆಚ್ಚು ಚಿತ್ರ ಪರದೆಗಳಲ್ಲಿ ಪ್ರದರ್ಶನಗೊಳ್ಳಲಿದೆ. ಇಂತಹ ಚಿತ್ರತಂಡದ ಜತೆ ಕೆಎಸ್ ಡಿಎಲ್ ಕೈಜೋಡಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಕೆಎಸ್ಡಿಎಲ್ ಕಳೆದ ನೂರಾಹತ್ತು ವರ್ಷಗಳಿಂದಲೂ ಕರ್ನಾಟಕದ ಪರಂಪರೆ ಮತ್ತು ಅಸ್ಮಿತೆಯನ್ನು ಪ್ರತಿನಿಧಿಸುತ್ತಿರುವ ಬ್ರ್ಯಾಂಡ್ ಆಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
ಎರಡು ವರ್ಷಗಳಿಂದ ಈಚೆಗೆ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ವಿಸ್ತರಣೆಗೆ ಒಲವು ಹೊಂದಿದೆ. ಜೊತೆಗೆ ರಫ್ತು ವಹಿವಾಟಿಗೆ ಒತ್ತು ನೀಡಿದ್ದು, ಪ್ಯಾಕೇಜಿಂಗ್, ಬ್ರ್ಯಾಂಡಿಂಗ್, ಪ್ರಚಾರ ಮತ್ತು ಅತ್ಯುತ್ಕೃಷ್ಟತೆಗೆ ಗಮನ ಹರಿಸಿದೆ. ಇದರ ಭಾಗವಾಗಿ ಖ್ಯಾತ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗೆ ಪ್ರಚಾರ ರಾಯಭಾರಿಯಾಗಿ ನೇಮಿಸಿಕೊಳ್ಳಲಾಗಿದೆ. ಇದರಿಂದ ಅಖಿಲ ಭಾರತ ಮಟ್ಟದಲ್ಲಿ ಹೊಸ ತಲೆಮಾರಿನ ಗ್ರಾಹಕರನ್ನು ತಲುಪಲು ಸಾಧ್ಯವಾಗಿದೆ. ಈಗ ಕಾಂತಾರ ತಂಡದ ಜತೆ ಸಂಸ್ಥೆಯು ಕೈಜೋಡಿಸುತ್ತಿದ್ದು, ತನ್ನ ಉತ್ಪನ್ನಗಳ ಮಾರಾಟವನ್ನು ಮತ್ತಷ್ಟು ವ್ಯಾಪಕಗೊಳಿಸುವ ಉದ್ದೇಶ ಈಡೇರಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ನುಡಿದಿದ್ದಾರೆ.
ಕೆಎಸ್ ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಮಾತನಾಡಿ, ಶತಮಾನಕ್ಕೂ ಹೆಚ್ಚಿನ ಇತಿಹಾಸ ಹೊಂದಿರುವ ಸಂಸ್ಥೆಯ ಮೈಸೂರು ಸ್ಯಾಂಡಲ್ ಸೋಪ್ ಒಂದು ವಿಶ್ವಾಸಾರ್ಹ ಬ್ರ್ಯಾಂಡ್ ಆಗಿದ್ದು, ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೊಂದಿದೆ. ಜನಪ್ರಿಯ ಮಾಧ್ಯಮವಾಗಿರುವ ಸಿನಿಮಾ ಮೂಲಕ ನಾವು ಜನರನ್ನು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತಲುಪಲು ಸಾಧ್ಯವಾಗಲಿದೆ ಎಂದಿದ್ದಾರೆ.
ENGLISH SUMMARY..
Mysore Sandal Soap Becomes Fragrance Partner for Kantara – Chapter 1: MB Patil
Bengaluru: Karnataka Soaps and Detergents Limited (KSDL), the state-owned enterprise renowned for its Mysore Sandal Soap, will be the fragrance partner and co-sponsor for Hombale Films’ Kantara – Chapter 1, starring Rishab Shetty, announced Large and Medium Industries Minister MB Patil on Friday.
Speaking about the tie-up, he said the Kannada film industry is popularly known as “Sandalwood”, just as KSDL is famed for its sandal soap and sandalwood oil. An agreement has now been signed between the state-owned enterprise and the film team, under which KSDL’s products will be promoted at every screening of the movie, the Minister added.
Kantara – Chapter 1 is set to be released in seven languages – Kannada, Telugu, Hindi, Tamil, Malayalam, English and Spanish. It will be released on 7,000 screens across India and more than 6,500 screens in 30 countries. Patil said it is a matter of pride that KSDL is partnering with such a professional film team, noting that the company has, for over 110 years, represented the tradition and identity of Karnataka.
Over the past two years, the state-owned company has been focusing on expanding its global market. It has given thrust to exports while emphasising packaging, branding, promotion and quality. As part of this effort, noted actress Tamannaah Bhatia was appointed brand ambassador a few months ago for a two-year term, helping the brand connect with a new generation of consumers across India. By collaborating with the Kantara team, KSDL now aims to further expand the reach of its products, Patil remarked.
KSDL Chairman Appaji Nadagouda said Mysore Sandal Soap, with over a century of legacy, is a trusted brand with global demand. Through cinema, one of the most popular mediums, the enterprise will be able to reach people on an even larger scale, he observed.
Key words: Mysore Sandal Soap, fragrance, partner, Kantara ,movie, M.B. Patil