ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆಯಲ್ಲಿ ಮೈಸೂರಿಗೆ ಎರಡನೇ ಸ್ಥಾನ…

ಮೈಸೂರು,ಜು,21,2020(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದ್ದು ಸಾವಿನ ಸಂಖ್ಯೆಯೂ ಕೂಡ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆಯಲ್ಲಿ ಮೈಸೂರು ಎರಡನೇ ಸ್ಥಾನದಲ್ಲಿದೆ.jk-logo-justkannada-logo

ರಾಜ್ಯ ರಾಜಧಾನಿ ಬೆಂಗಳೂರು ಅತಿ ಹೆಚ್ಚು ಸೋಂಕಿತರ ಸಾವಿನ ಪ್ರಕರಣ ದಾಖಲಾಗಿದ್ದು ಮೊದಲ ಸ್ಥಾನದಲ್ಲಿದ್ದರೇ ಮೈಸೂರು ಎರಡನೇ ಸ್ಥಾನದಲ್ಲಿದೆ. ಮೈಸೂರಲ್ಲಿ ಈವರೆಗೆ ಒಟ್ಟು 75 ಜನರ ಕೊರೊನಾಗೆ ಬಲಿಯಾಗಿದ್ದಾರೆ. ಜತೆಗೆ ಸೋಂಕಿತರ ಸಂಖ್ಯೆಯಲ್ಲೂ ದಿನೇ ದಿನೇ ಹೆಚ್ಚಳವಾಗುತ್ತಿದೆ.mysore-second-highest-corona-deaths-state

ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ ಸಾವಿರ ಗಡಿ ದಾಟಿದ್ದು, ಡೆತ್ ರೇಟ್ ಕಡಿಮೆ ಮಾಡಲಿ ಜಿಲ್ಲಾಡಳಿತದ ಹರಸಾಹಸ ಪಡುತ್ತಿದೆ. ಅದರೂ ಸಹ  ಕೊರೊನ ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇದ್ದು ಮೈಸೂರು ಜನತೆಯಲ್ಲಿ ಆತಂಕ ಮನೆ ಮಾಡಿದೆ. ಸಾವಿನ ಪ್ರಕರಣಗಳು ಸಾಂಸ್ಕೃತಿಕ ನಗರಿಗೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ.

Key words: Mysore – second -highest – corona- deaths – state.