ಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಸಾವು.

ಮೈಸೂರು, ಏಪ್ರಿಲ್, 10, 2024 (www.justkannada.in): ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಆನೆಚೌಕೂರು ಶಿಬಿರದಲ್ಲಿಅನಾರೋಗ್ಯದಿಂದ ಬಳಲುತ್ತಿದ್ದ ಆನೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ.

ವಿರಾಟ್ ಎಂಬ ಸಾಕಾನೆ ಅನಾರೋಗ್ಯದಿಂದ ಸಾವನ್ನಪ್ಪಿದೆ. ವೀರನಹೊಸಹಳ್ಳಿ ವನ್ಯಜೀವಿ ವಲಯದಿಂದ ದಿನಾಂಕ 04-11-2023 ರಂದು ಸೆರೆ ಹಿಡಿಯಲಾಗಿತ್ತು. ತುಂಬಾ ದಿನಗಳಿಂದ ತೀವ್ರ ಅನಾರೋಗ್ಯದಿಂದ ವಿರಾಟ್ ಆನೆ ಬಳಲುತ್ತಿತ್ತು. ಈ ಮಧ್ಯೆ ಆನೆಗೆ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಆನೆ ಸಾವನ್ನಪ್ಪಿದೆ.

ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನಂತರ ಸಾಕಾನೆಯನ್ನು ಹೂಳುವ ಮುಖಾಂತರ ಶವ ಸಂಸ್ಕಾರ ನೆರವೇರಿಸಲಾಯಿತು.

Key words: mysore, sick, elephant, dies