ಶೀಘ್ರ ಆರೆಂಜ್ ಝೋನ್ : ಇನ್ನೊಂದು ವಾರದಲ್ಲೇ ಮೈಸೂರು ಕೊರೋನಾ ಮುಕ್ತ

 

ಮೈಸೂರು, ಮೇ 07, 2020 : (www.justkannada.in news ) ಇನ್ನೊಂದು ವಾರದಲ್ಲೇ ಮೈಸೂರು ಕೊರೋನಾ ಮುಕ್ತವಾಗುವ ಸಾಧ್ಯತೆ ಇದೆ. ಈಗಾಗಲೇ ಕೊರೋನಾ ಪಾಸಿಟಿವ್ ಪ್ರಕರಣ 7ಕ್ಕೆ ಬಂದಿದ್ದರಿಂದ ಆದಷ್ಟು ಬೇಗ ಶೂನ್ಯಕ್ಕೆ ಇಳಿಯಲಿದೆ ಎಂದು ಸಚಿವ ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರು ಮೃಗಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಚಿವರು, ಈ ಕಾರಣದಿಂದಲೇ ರೆಡ್ ಝೋನ್ ನಿಂದ ಮೈಸೂರನ್ನು ಆರೆಂಜ್ ಝೋನ್ ಆಗಿ ಪರಿವರ್ತಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಶೀಘ್ರ ನಿರ್ಧಾರ ಹೊರಬೀಳಲಿದೆ. ಮುಂದೆ ಪರಿಸ್ಥಿತಿ ನೋಡಿಕೊಂಡು ಗ್ರೀನ್ ಝೋನ್ ಗೆ ತರುವ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

mysore-somashekar-carona-free-disitrict-karnataka-covid.19

ಸಚಿವ ಎಸ್.ಟಿ.ಸೋಮಶೇಖರ್ ಶ್ಲಾಘನೆ

ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ಅವರಲ್ಲಿ ಮೃಗಾಲಯಕ್ಕೆ ದೇಣಿಗೆ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ 84 ಲಕ್ಷ ರೂ. ಸಂಗ್ರಹಿಸಿ ಕೊಡುಗೆಯಾಗಿ ನೀಡಿದ್ದಾರೆ. ಇದು ಅವರ ಸಮಾಜಮುಖಿ ಕಾರ್ಯವನ್ನು ತೋರಿಸುತ್ತದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಎಸ್.ಟಿ.ಸೋಮಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಅಮೆರಿಕದ ಅಕ್ಕ ಸಂಸ್ಥೆಯ ಅಧ್ಯಕ್ಷರಾದ ಅಮರನಾಥ ಅವರೊಂದಿಗೆ ಮಾತನಾಡಿದ್ದೇನೆ. ಅವರೂ ದೇಣಿಗೆ ಬಗ್ಗೆ ಮಾಹಿತಿ ನೀಡಿದ್ದೇನೆ. ಅವರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ಅಕ್ಕ ಸಮ್ಮೇಳನ ನಡೆಯದಿರುವುದರಿಂದ ಸಹಾಯಮಾಡುವಂತೆ ಕೇಳಿಕೊಂಡಿದ್ದೇನೆ. ಶೀಘ್ರ ಆರ್ಥಿಕ ಸಹಾಯ ಮಾಡಲಿದ್ದಾರೆ ಎಂದು ಸಚಿವರು ತಿಳಿಸಿದರು.

mysore-somashekar-carona-free-disitrict-karnataka-covid.19

ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು ಮಾತನಾಡಿ, ನಾನು ಮೈಸೂರಿಗೆ ಭೇಟಿ ನೀಡುವುದಾಗಿ ತಿಳಿಸಿದಾಗ ಉಸ್ತುವಾರಿ ಸಚಿವ ಸೋಮಶೇಖರ್ ಅವರು ಮೃಗಾಲಯಕ್ಕೆ ಆರ್ಥಿಕ ಸಹಾಯ ಮಾಡುವಂತೆ ಕೇಳಿಕೊಂಡರು. ಇದಕ್ಕೆ ಸಂತೋಷದಿಂದ ಒಪ್ಪಿದೆ. ನನ್ನ ಕ್ಷೇತ್ರದ ಬಿಜೆಪಿ ಮುಖಂಡರು, ಜನಪ್ರತಿನಿಧಿಗಳು ಸಹ ಕೊಡುಗೆ ನೀಡಿದ್ದಾರೆ. ಹೀಗಾಗಿ 84 ಲಕ್ಷ ರೂ. ಸಂಗ್ರಹವಾಗಿದೆ. ಮನುಷ್ಯರಿಗೆ ಹಸಿವಾದರೆ ಹೇಳಿಕೊಳ್ಳಬಹುದು. ಆದರೆ, ಪ್ರಾಣಿಗಳಿಗೆ ಅದು ಸಾಧ್ಯವಿಲ್ಲ. ಹೀಗಾಗಿ ಅವುಗಳ ಹಸಿವು ನೀಗಿಸುವುದು ನಮ್ಮ ಕರ್ತವ್ಯ ಎಂದು ಸಚಿವ ಬಸವರಾಜು ಅವರು ಅಭಿಪ್ರಾಯಪಟ್ಟರು.

 

key words : mysore-somashekar-carona-free-disitrict-karnataka-covid.19