ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾದ ದಂಪತಿ.

ಮೈಸೂರು,ಜನವರಿ,26,2022(www.justkannada.in):  ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

ಉದಯಗಿರಿಯ ಸಾತಗಳ್ಳಿ ಲೇಔಟ್ ನಲ್ಲಿ ಈ ಧಾರುಣ ಘಟನೆ ನಡೆದಿದೆ. ಸಂತೋಷ (26), ಭವ್ಯ (22) ಮೃತ ದಂಪತಿ. ಇಬ್ಬರು ಊಟದಲ್ಲಿ ವಿಷ ಬೆರೆಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂತೋಷ್ ಮತ್ತು ಭವ್ಯ ಕಳೆದ ಕೆಲದಿನಗಳಿಂದ ಆರ್ಥಿಕ ಸಮಸ್ಯೆಗೆ ಸಿಲುಕಿದ್ದರು. ಹೀಗಾಗಿ ಸಾಲಕ್ಕೆ ಹೆದರಿ ದಂಪತಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಉದಯಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: mysore-sucide- Couple