ನಾವೇ ಸಿಎಂ ಅಂತ ಸೆಲ್ಪ್ ಡಿಕ್ಲೇರ್ ಮಾಡಿಕೊಳ್ಳುವುದು ಸರಿಯಲ್ಲ: ಪರೋಕ್ಷವಾಗಿ ನಾನೂ ಸಿಎಂ ಅಭ್ಯರ್ಥಿ ಎಂದ ಎಂ.ಬಿ ಪಾಟೀಲ್.

ಮೈಸೂರು,ಜೂನ್,2021(www.justkannada.in): ಎಲ್ಲರು ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ. ಆದರೆ ನಾವೇ ಮುಖ್ಯಮಂತ್ರಿ ಅಂತ ಸೆಲ್ಪ್ ಡಿಕ್ಲೆರ್ ಮಾಡಿಕೊಳ್ಳುವುದು ಸರಿಯಲ್ಲ. ಡಿಕ್ಲೇರ್ ಮಾಡಿಕೊಂಡವರೆಲ್ಲ ಸಿಎಂ ಆಗುವುದಿಲ್ಲ. ಯಾರು ಸಿಎಂ ಆಗಬೇಕು ಎಂಬುದನ್ನು ಜನ ತೀರ್ಮಾನ ಮಾಡಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.jk

ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಇಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು. ಮಾಜಿ ಸಚಿವ ಎಂ.ಬಿ ಪಾಟೀಲ್‌ಗೆ  ಮಾಜಿ ಶಾಸಕ ವಾಸು ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು.

ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಎಂ.ಬಿ ಪಾಟೀಲ್, ಲಿಂಗಾಯತರಲ್ಲಿ ಪರ್ಯಾಯ ನಾಯಕರಿಲ್ಲ ಎಂಬುದು ಸುಳ್ಳು. ಯಡಿಯೂರಪ್ಪ ಅತಿದೊಡ್ಡ ನಾಯಕರು ಅದರಲ್ಲಿ ಅನುಮಾನವಿಲ್ಲ. ಅವರ ನಂತರ ಪರ್ಯಾಯ ನಾಯಕರಿಲ್ಲ ಎಂಬುದನ್ನು ನಾನು ಒಪ್ಪುವುದಿಲ್ಲ. ಕಾಂಗ್ರೆಸ್ ನಲ್ಲಿ ನಾನು ಶರಣ‌ ಪ್ರಕಾಶ್ ಪಾಟೀಲ್‌, ಈಶ್ವರ ಖಂಡ್ರೆ ಸೇರಿದಂತೆ‌ ಹಲವು ನಾಯಕರಿದ್ದೇವೆ. ಬಿಜೆಪಿಯಲ್ಲಿ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ, ಯತ್ನಾಳ್, ವಿ.ಸೋಮಣ್ಣ, ಅರವಿಂದ್ ಬೆಲ್ಲದ್ ಸೇರಿ ಅನೇಕರಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ ನಲ್ಲಿ ಬಾವಿ ಮುಖ್ಯಮಂತ್ರಿ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ್, ಮುಂದಿನ ಮುಖ್ಯಮಂತ್ರಿ ವಿಚಾರ‌ ಇತ್ತೀಚಿನ ದಿನಗಳಲ್ಲಿ ಚರ್ಚೆಯಾಗಿದೆ. ಕೆಲವರು ಅಭಿಮಾನದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಈ ವಿಚಾರವಾಗಿ ಯಾರೂ ಮಾತನಾಡಬಾರದು ಎಂದು ಹೈಕಮಾಂಡ್ ಸೂಚಿಸಿದೆ. ಕಾಂಗ್ರೆಸ್ ಇತಿಹಾಸದಲ್ಲೇ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ ಉದಾಹರಣೆ ಇಲ್ಲ. ಯಾವ ರಾಜ್ಯದಲ್ಲೂ ಕಾಂಗ್ರೆಸ್ ಚುನಾವಣೆಗೂ ಮುಂಚಿತವಾಗಿ ಸಿಎಂ ಅಭ್ಯರ್ಥಿ ಹೆಸರು ಹೇಳಿಲ್ಲ. ಹೀಗಾಗಿ ಮುಖ್ಯಮಂತ್ರಿ ಯಾರಾಗಬೇಕು ಅನ್ನುವ ಚರ್ಚೆ ಅಪ್ರಸ್ತುತ ಎಂದು ನುಡಿದರು.

ರಾಜ್ಯದಲ್ಲಿ 150ಸ್ಥಾನ ಗೆಲ್ಲೋದು ನಮ್ಮ ಆದ್ಯತೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕಿದೆ. ಗುರಿ ಮುಟ್ಟಿದ ಬಳಿಕ ಸಿಎಲ್ ಪಿ ಸಭೆ ನಡೆಯುತ್ತೆ. ಬಳಿಕ ಹೈಕಮಾಂಡ್ ಮುಖ್ಯಮಂತ್ರಿ ಯಾರಾಗಬೇಕೆಂದು ಸೂಚನೆ ಮಾಡ್ತಾರೆ. ಹೀಗಾಗಿ ಯಾರೋ ಮಾತನಾಡಿದ ವಿಚಾರಕ್ಕೆ ಹೆಚ್ಚು ಬೆಲೆ ಕೊಡಬೇಕಿಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಪರೋಕ್ಷವಾಗಿ ನಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಎಂಬಿ ಪಾಟೀಲ್.

ತಾವು ಮುಖ್ಯಮಂತ್ರಿ ಅಭ್ಯರ್ಥಿಯೇ ? ಮಾಧ್ಯಮದವರ ಪ್ರಶ್ನೆಗೆ ನಿಶ್ಚಿತವಾಗಿ ನಾನೂ ಕೂಡ ಎಂದು ಎಂ.ಬಿ. ಪಾಟೀಲ್ ತಿಳಿಸಿದರು. ಈ ಮೂಲಕ ಪರೋಕ್ಷವಾಗಿ ನಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದರು.

ಎಲ್ಲರಲ್ಲಿಯೂ ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ದುರಾಸೆ ಇರಬಾರದು. ನಮ್ಮ ಗುರಿ ಕಾಂಗ್ರೆಸ್ ಅನ್ನ ಅಧಿಕಾರಕ್ಕೆ ತರುವುದು‌. ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇದೆ. ನಾನು ಪಕ್ಷದ ಶಿಸ್ತು ಪಾಲನೆ ಮಾಡುತ್ತೇನೆ. ಮುಖ್ಯಮಂತ್ರಿ ಚರ್ಚೆ ಬೇಡ ಅಂತಾ ಸುರ್ಜೆವಾಲ ಸೂಚನೆ ನೀಡಿದ್ದಾರೆ. ಸುರ್ಜೆವಾಲ ಅವರ ಸೂಚನೆ ನಾನು ಪಾಲನೆ ಮಾಡುತ್ತೇನೆ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ. ಸಾಮೂಹಿಕ ನಾಯಕತ್ವದ ಮೂಲಕ ನಾವು ಚುನಾವಣೆ ಎದುರಿಸುತ್ತೇವೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

Key words: mysore-suttur math-former minister- MB Patil- CM candidate