ರಾಜ್ಯಸಭೆ, ವಿಧಾನ ಪರಿಷತ್ ಸದಸ್ಯತ್ವ ವಿಚಾರ : ಅಡ್ಡಗೋಡೆ ಮೇಲೆ ದೀಪ ಇಟ್ಟ ಸಚಿವ ರಮೇಶ್ ಜಾರಕಿಹೊಳಿ…

ಮೈಸೂರು,ಮೇ,29,2020(www.justkannada.in):  ರಾಜ್ಯಸಭೆ, ವಿಧಾನ ಪರಿಷತ್ತು ಸದಸ್ಯತ್ವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ನಮ್ಮ ಪಕ್ಷದ ಹೈಕಮಾಂಡ್ ಇದೆ. ಎಲ್ಲವನ್ನೂ ಅವರೇ ತೀರ್ಮಾನ ಮಾಡ್ತಾರೆ ಎಂದು ಹೇಳಿದರು.

ಸುತ್ತೂರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ನೀಡಿಸುತ್ತೂರು ಏತ ನೀರಾವರಿ ಯೋಜನೆಯ ಕಾಮಗಾರಿ ವೀಕ್ಷಣೆ ಮಾಡಿದರು. ನಂಜನಗೂಡು, ಗುಂಡ್ಲುಪೇಟೆ ಹಾಗೂ ಕೊಳ್ಳೇಗಾಲ  ತಾಲೂಕಿನ 24ಕೆರೆಗಳಿಗೆ ನೀರು ತುಂಬಿಸುವ ಯೋಜನೆ. ಸುತ್ತೂರಿನ ನದಿ ತೀರದಲ್ಲಿ ಪಂಪ್ ಹೌಸ್ ನಿರ್ಮಾಣ. ಇಂದು ಪಂಪ್ ಹೌಸ್ ಕಾಮಗಾರಿ ವೀಕ್ಷಿಸಿದರು. .ಸಚಿವರಿಗೆ ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಎನ್.ಮಹೇಶ್, ನಿರಂಜನ್ ಸೇರಿ ಇತರ ಅಧಿಕಾರಿಗಳು ಸಾಥ್ ನೀಡಿದರು.

ನಂತರ ಮಾಧ್ಯಮದವರ ಜತೆ ಮಾತನಾಡಿ ಬಿಜೆಪಿ ಶಾಸಕರ ರಹಸ್ಯ ಸಭೆ ವಿಚಾರ ಕುರಿತು ಸ್ಪಷ್ಟನೆ ನೀಡಿದ ಸಚಿವ ಜಾರಕಿಹೊಳಿ, ಕಾಫಿ, ತಿಂಡಿಗೆ ಸೇರೋದೆಲ್ಲ ತಪ್ಪಲ್ಲ. ಕರೊನಾ ಲಾಕ್‌ಡೌನ್ ಕಾರಣದಿಂದ ಯಾರೂ ಪರಸ್ಪರ ಭೇಟಿಯಾಗಲು ಆಗಿರಲಿಲ್ಲ. ಬಹುದಿನಗಳ ನಂತರ ಎಲ್ಲರೂ ಕೂಡಿದ್ದಾರೆ. ಒಂದು ಕಡೆ ಕುಳಿತು ಊಟ ಮಾಡಿದ್ದಾರೆ.  ಅದನ್ನೇ ಮಾಧ್ಯಮಗಳು ತಪ್ಪಾಗಿ ಅರ್ಥೈಸುತ್ತಿವೆ. ಸಭೆ ಸೇರಿದ ಮಾತ್ರಕ್ಕೆ ಏನೋ ಆಗಿಬಿಡುವುದಿಲ್ಲ.  ಉಮೇಶ್ ಕತ್ತಿ ನನ್ನ ಸ್ನೇಹಿತ. ಆತ ಏನೇನೋ ಆಡ್ತನೆ, ಆದ್ರೆ ಪಕ್ಷ ಬಿಡೋದಿಲ್ಲ ಎಂದರು.

ವಿಶ್ವನಾಥ್ ಆಯ್ಕೆ ವಿಚಾರವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತೆ. ನಾನು, ವಿಶ್ವನಾಥ್ ನಿನ್ನೆ ಶ್ರೀನಿವಾಸ ಪ್ರಸಾದ್ ಅವರನ್ನು ಭೇಟಿ ಮಾಡಿದ್ದೆವು.  ಪ್ರಸಾದ್ ಹಿರಿಯರು, ನನಗೆ ಯೂತ್ ಕಾಂಗ್ರೆಸ್‌ ಕೋಟಾದಡಿ ಮೊದಲು ಟಿಕೆಟ್ ಕೊಟ್ಟಿದ್ದೇ ಪ್ರಸಾದ್.  ನನ್ನ ರಾಜಕೀಯ ಪ್ರವೇಶಕ್ಕೆ ಅವರು ಕಾರಣಕರ್ತರು. ಆದ್ದರಿಂದ ಭೇಟಿ ಮಾಡಿ ಮಾತನಾಡಿದ್ದೇನೆ. ಅದರ ಹೊರತು ಬೇರೇನೂ ಇಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ  ತಿಳಿಸಿದರು.

Key words: mysore- suttur- Minister -Ramesh jarakiholi