ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವು.

ಮೈಸೂರು,ಜುಲೈ,30,2021(www.justkannada.in): ಕೆರೆಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ದನಗಾಹಿಗಳು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.

ಹುಣಸೂರಿ ತಾಲೂಕಿನ ಹಳೆ ವಾರಂಚಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಬ್ದುಲ್ (24) ರಾಜಿಕ್ ಖಾನ್ (30) ಮೃತರು. ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಆಯ ತಪ್ಪಿ ಬಿದ್ದು ನೀರುಪಾಲಾಗಿದ್ದಾರೆ. ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಆಯತಪ್ಪಿ ಬಿದ್ದವನನ್ನ ರಕ್ಷಿಸಲು ಹೋದವ ಸೇರಿದಂತೆ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಅಬ್ದುಲ್ ಅವಿವಾಹಿತನಾಗಿದ್ದು, ರಾಜಿಕ್ ಖಾನ್‌ ಗೆ ಪತ್ನಿ, ಮೂರು ವರ್ಷದ ಪುತ್ರಿ ಇದ್ದಾಳೆ. ಹಳೆ ವಾರಂಚಿ ಗ್ರಾಮದ ಬಳಿಯ ಗುರುಪುರ ಕೆರೆಯಲ್ಲಿ ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಹಗ್ಗ ಸಿಲುಕಿ ನೀರಿಗೆ ಎಳೆದೊಯ್ದಿದೆ. ನೀರಿಗೆ ಬೀಳುತ್ತಿದ್ದಂತೆ ರಾಜಿಕ್ ಖಾನ್ ಆತನನ್ನು ರಕ್ಷಿಸಲು ಹೋಗಿ ಸಾದ್ಯವಾಗದೇ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಜಾನುವಾರುಗಳು ಮಾತ್ರ ಇದ್ದುದನ್ನು ಕಂಡ ಇತರೆ ದನಗಾಹಿಗಳು, ಕೆರೆ ಬಳಿ ನೋಡಲಾಗಿ ಚಪ್ಪಲಿಗಳು ಇದ್ದುದ್ದನ್ನು ಕಂಡು ಗ್ರಾಮಸ್ಥರಿಗೆ ಮಾಹಿತಿ ನೀಡಿದ ಮೇರೆಗೆ ಕೆರೆಗಿಳಿದು ಇಬ್ಬರ ಶವವನ್ನು ಹೊರ ತೆಗೆದರು. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore-Two youth -die – lake-water death