ಮೈಸೂರು,ಜನವರಿ,3,2026 (www.justkannada.in): ಜನವರಿ 5 ರಂದು ಮೈಸೂರು ವಿಶ್ವ ವಿದ್ಯಾನಿಲಯದ 106ನೇ ಘಟಿಕೋತ್ಸವ ಜರುಗಲಿದ್ದು ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ ಎಂದು ಮೈಸೂರು ವಿವಿ ಕುಲಪತಿ ಲೋಕನಾಥ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಮೈಸೂರು ವಿವಿ ಕುಲಪತಿ ಲೋಕನಾಥ್, ಮೈಸೂರು ವಿಶ್ವ ವಿದ್ಯಾನಿಲಯದ 106ನೇ ಘಟಿಕೋತ್ಸವ ಹಿನ್ನೆಲೆ ಈ ಭಾರಿ ಮೈಸೂರು ವಿಶ್ವ ವಿದ್ಯಾನಿಲಯದಿಂದ ಮೂವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಶಿಕ್ಷಣ ತಜ್ಞ, ಪರಿಸರವಾದಿ ಜಯಚಂದ್ರ ಬಾಬು, ಮತ್ತು ಡಾ. ಟಿ ಶಾಮ್ ಭಟ್ ಅವರಿಗೆ ಈ ಬಾರಿ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು.
Key words: Mysore University, 106th convocation, tomorrow, Honorary doctorates







