ಮೈಸೂರು ವಿವಿಯಿಂದ 2022-23ನೇ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗಳಿಗೆ ಅರ್ಜಿ ಆಹ್ವಾನ.

ಮೈಸೂರು,ನವೆಂಬರ್,12,2022(www.justkannada.in): ಮೈಸೂರು ವಿಶ್ವವಿದ್ಯಾನಿಲಯದಿಂದ 2022-23ನೇ ಶೈಕ್ಷಣಿಕ ಸಾಲಿನ ಎಲ್ಲಾ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

2022-23ನೇ  ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಾತಿ ಸಂಬಂಧ ಈಗಾಗಲೇ ಆನ್ ಲೈನ್ ಪೋರ್ಟಲ್ ಮುಖಾಂತರ ರಿಜಿಸ್ಟರ್ ಆಗಿ ಪ್ರವೇಶ ಪರೀಕ್ಷೆ ತೆಗೆದುಕೊಂಡು ಅರ್ಹತೆಯಾದ ವಿದ್ಯಾರ್ಥಿಗಳು ಅರ್ಹ ವಿದ್ಯಾರ್ಹತೆಯ ಮೇಲೆ  ದಿನಾಂಕ 15-11-2022 ರಿಂದ ಆನ್ ಲೈನ್ ನಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

2022-23ನೇ ಶೈಕ್ಷಣಿಕ ಸಾಲಿನಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿನ ಅಧ್ಯಯನ ವಿಭಾಗಗಳು, ಮಾನಸಗಂಗೋತ್ರಿ, ಮೈಸೂರು, ಸರ್.ಎಂ.ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ, ತೂಬಿನಕೆರೆ, ಮಂಡ್ಯ, ಸ್ನಾತಕೋತ್ತರ ಕೇಂದ್ರ ಹೇಮಗಂಗೋತ್ರಿ, ಹಾಸನ ಮತ್ತು ಡಾ.ಬಿ.ಆರ್. ಅಂಬೇಡ್ಕರ್, ಸ್ನಾತಕೋತ್ತರ ಕೇಂದ್ರ, ಚಾಮರಾಜನಗರ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ನೇರ ಆಡಳಿತಕ್ಕೊಳಪಡುವ ಮತ್ತು ಮಾನ್ಯತೆ ಪಡೆದಿರುವ ಸರ್ಕಾರಿ / ಖಾಸಗಿ ಹಾಗೂ ಸ್ವಾಯತ್ತ ಕಾಲೇಜುಗಳಲ್ಲಿ ವಿಶ್ವವಿದ್ಯಾನಿಲಯ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆದಿರುವಂತಹ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹಾಗೆಯೇ  ನವೆಂಬರ್ 15ರಿಂದ ನವೆಂಬರ್ 24ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶವಿದೆ.

Key words: Mysore University -invites -applications – admissions – all postgraduate- courses – 2022-23.