ಹಿಂಬಾಕಿ ಶಿಷ್ಯ ವೇತನ ಬಿಡುಗಡೆಗೆ ಆಗ್ರಹ: ಎಸ್.ಸಿ ಮತ್ತು ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳಿಂದ ಪ್ರತಿಭಟನೆ.

ಮೈಸೂರು,ಮಾರ್ಚ್,15,2023(www.justkannada.in): 2021ನೇ ಸಾಲಿನ ಹಿಂಬಾಕಿ ಶಿಷ್ಯ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎಸ್.ಸಿ ಮತ್ತು ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳು ಇಂದು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.

ನಗರದ ಕ್ರಾಫರ್ಡ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದ್ದು, ಮೈಸೂರು ವಿಶ್ವ ವಿದ್ಯಾನಿಲಯದ ವಿರುದ್ಧ ಪ್ರತಿಭಟನಾನಿರತ ಸಂಶೋಧನಾ ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

46 ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಿಲ್ಲ. ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡಬೇಕಿರುವ ಶಿಷ್ಯ ವೇತನವನ್ನ ಇತರೆ ಕಾಮಗಾರಿಗಳಿಗೆ ಬಳಕೆ ಮಾಡಿದ್ದಾರೆ. ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುವ ಶಿಷ್ಯ ವೇತನದಲ್ಲೂ ಅಕ್ರಮ ನಡೆದಿದೆ. ಕೂಡಲೇ ಎಸ್ಸಿ ಎಸ್ಟಿ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಜಾರಿ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟವನ್ನ ತೀವ್ರಗೊಳಿಸುತ್ತೇವೆ ಎಂದು ಸಂಶೋಧನಾ ವಿದ್ಯಾರ್ಥಿ ಕಲ್ಲಳ್ಳಿ ಕುಮಾರ್ ಎಚ್ಚರಿಕೆ ನೀಡಿದರು.

ಈ ವೇಳೆ ಪ್ರತಿಭಟನೆಯಲ್ಲಿ ಕಿರಣ್, ನಟರಾಜು, ಸೋಮಶೇಖರ್, ಅಶ್ವಿನಿ, ಪ್ರಮೀಳಾ, ಭವ್ಯ, ಕುಶಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Key words: mysore –university- Protest -SC – ST- research -students.