ಕೋವಿಡ್ ಪರೀಕ್ಷೆಗೆ ಮುಂದಾಗದ ಮೈಸೂರು ವಿವಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು…

ಮೈಸೂರು,ಏಪ್ರಿಲ್,16,2021(www.justkannada.in):  ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮೈಸೂರು ವಿಶ್ವ ವಿದ್ಯಾನಿಲಯ ಆವರಣದಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗಾಗಿ ಉಚಿತ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು, ಆದರೆ ಇದಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಹೌದು, ಮೈಸೂರಿನಲ್ಲಿ ದಿನೇ ದಿನೇ  ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವುದರಿಂದ  ಮೈಸೂರು ವಿಶ್ವ ವಿದ್ಯಾನಿಲಯದಲ್ಲಿ ಉಚಿತ ಕೋವಿಡ್ ಪರೀಕ್ಷೆಗಾಗಿ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟಿನ್ ಮತ್ತು ಬುದ್ಧ ವಿಗ್ರಹ ಎರಡು ಕಡೆಗಳಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ತೆರೆಯಲಾಗಿದೆ.  ಕಳೆದ ಎರಡು ದಿನಗಳಿಂದಲೂ ಇಲ್ಲಿ ಕೊರೋನಾ ಟೆಸ್ಟ್ ಮಾಡಲಾಗುತ್ತಿದೆ.

ಆದರೆ ಇದಕ್ಕೆ ಮೈಸೂರು ವಿವಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೈಸೂರು ವಿವಿಯಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಅಂದಾಜು ಸಂಖ್ಯೆ ಮೂರು ಸಾವಿರದಷ್ಟಿದೆ. ಆರೋಗ್ಯದ ಹಿತದೃಷ್ಠಿಯಿಂದ ಮೈಸೂರು ವಿವಿ ಈ ರೀತಿ ಕೋವಿಡ್ ಟೆಸ್ಟ್ ಕ್ಯಾಂಪ್ ಶುರು ಮಾಡಿದೆ. ಆದರೆ ಸ್ವಯಂ ಪ್ರೇರಿತವಾಗಿ ಕೋವಿಡ್ ಟೆಸ್ಟ್ ಗೆ ಮುಂದಾಗುತ್ತಿಲ್ಲ. ಕೇವಲ 100 ರಿಂದ 150 ಮಂದಿ ಮಾತ್ರ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ.Mysore university- staff - students - did not - covid test

ಹೀಗಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳ ಆರೋಗ್ಯದ ದೃಷ್ಠಿಯ ಉದ್ದೇಶದಿಂದ ಮೈಸೂರು ವಿವಿ  ಉಚಿತ ತಪಾಸಣೆಗೆ ಮುಂದೆ ಬಂದರೂ ಸಹ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳದಿರುವುದು ವಿಪರ್ಯಾಸ.

Key words: Mysore university- staff – students – did not – covid test.