Saturday, November 14, 2026

Dasara Wishes

Happy Dasara
Home Front Page ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ: ನಾಳೆ ಅಂತ್ಯಕ್ರಿಯೆ.

ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ: ನಾಳೆ ಅಂತ್ಯಕ್ರಿಯೆ.

ಮೈಸೂರು,ಏಪ್ರಿಲ್,29,2024 (www.justkannada.in): ಅನಾರೋಗ್ಯದಿಂದ ಬಳಲುತ್ತಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದು,  ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ.

ಈ ಕುರಿತು ಶ್ರೀನಿವಾಸ್ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್‌  ಮಾಹಿತಿ ನೀಡಿದ್ದು,  ಬೌಧ್ದ ಧರ್ಮದ ವಿಧಿ ವಿಧಾನದಂತೆ ನಾಳೆ ಅಂತ್ಯಕ್ರಿಯೆ ನಡೆಯಲಿದೆ. ಅವರು ಬೌದ್ದ ಧರ್ಮ ಅನುಯಾಯಿಯಾಗಿದ್ರು. ಇಂದು ಮಧ್ಯಾಹ್ನ 1 ಗಂಟೆವರೆಗೆ ಜಯಲಕ್ಷ್ಮಿ ಪುರಂ ನಿವಾಸದಲ್ಲಿ  ಅಂತಿಮ ದರ್ಶನಕ್ಕೆ ವ್ಯವಸ್ಥೆ‌ ಮಾಡಲಾಗಿದೆ. ಬಳಿಕ ಅಶೋಕಪುರಂನ ಎನ್.ಟಿ.ಎಂ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ: ನಾಳೆ ಅಂತ್ಯಕ್ರಿಯೆ shrinivas prasad

ನಾಳೆ ಅಶೋಕ್ ಪುರಂನಲ್ಲಿ ಪಾರ್ಥೀವ ಶರೀರದ ಮೆರವಣಿಗೆ ಮಾಡಲಾಗುತ್ತದೆ. ಬಳಿಕ ಸಿಲ್ಕ್ ಫ್ಯಾಕ್ಟರಿ ಸರ್ಕಲ್ ಬಳಿ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಪ್ರತಿಮಾ ಪ್ರಸಾದ್‌ ತಿಳಿಸಿದ್ದಾರೆ.

Key words: mysore, V. Srinivas Prasad, passes away