ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲು.

ಮೈಸೂರು,ಮಾರ್ಚ್,26,2024, (www.justkannada.in): ಕಪಿಲಾ ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರು ಪಾಲಾಗಿರುವ ಘಟನೆ ಇಂದು ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯಲ್ಲಿ ಈ ಘಟನೆ ನಡೆದಿದೆ. ಬಿಹಾರ ಮೂಲದ ಮಿಲನ್(22), ಮೋಹನ್(25), ತರುಣ್ (19) ಮೃತ ಯುವಕರು. ಬಿಹಾರ ಮೂಲದ ಮಿಲನ್ ಮೃತ ದೇಹ ಪತ್ತೆಯಾಗಿದ್ದು ಇನ್ನುಳಿದ ಇಬ್ಬರು ಯುವಕರ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.

ಗುತ್ತಿಗೆ ಆಧಾರದ ಮೇಲೆ ನೆಸ್ಲೆ ಕಂಪನಿಯಲ್ಲಿ ಯುವಕರು ಕೆಲಸ ಮಾಡುತ್ತಿದ್ದರು. ಬಿಸಿಲ ಬೇಗೆಯಿಂದಾಗಿ ಮೂವರು ಯುವಕರು ಈಜಲು ಹೋಗಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳೀಯರು ನಂಜನಗೂಡು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಕಪಿಲಾ ನದಿಯಲ್ಲಿ ಶವಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore,youths,swimming,death