ಬೆಂಗಳೂರಿನಲ್ಲಿ ನಿಗೂಢ ಸ್ಪೋಟ ಪ್ರಕರಣ: ಸ್ಥಳಕ್ಕೆ ಎಫ್ ಎಸ್ ಎಲ್  ಅಧಿಕಾರಿಗಳ ಭೇಟಿ: ಗೋದಾಮು ಮಾಲೀಕ ಪೊಲೀಸರ ವಶಕ್ಕೆ.

ಬೆಂಗಳೂರು,ಸೆಪ್ಟಂಬರ್,23,2021(www.justkannada.in):  ಬೆಂಗಳೂರಿನ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ ನಿಗೂಢ ಸ್ಪೋಟಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಎಫ್ ಎಸ್ ಎಲ್  ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ನ್ಯೂ ತರಗುಪೇಟೆಯಲ್ಲಿ ಸಂಭವಿಸಿದ ನಿಗೂಢ ಸ್ಪೋಟದಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನು ಇದೀಗ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಪೊಲೀಸರು ಗೋದಾಮು ಮಾಲೀಕ ಬಾಬು ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಗೋದಾಮು ಮಾಲೀಕ ಗಣೇಶ್ ಬಾಬು ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿರುವ ಎಫ್ ಎಸ್ ಎಲ್ ಅಧಿಕಾರಿ, ಪಟಾಕಿ ಸ್ಪೋಟದಿಂದ ಇಂತಹ ದೊಡ್ಡ ಅವಘಡ ನಡೆಯುವುದಿಲ್ಲ. ಪಟಾಕಿ ಸ್ಪೋಟದಿಂದ ದೇಹ ಛಿದ್ರ ಛಿದ್ರವಾಗಲು ಸಾಧ್ಯವಿಲ್ಲ. ಮೇಲ್ನೋಟಕ್ಕೆ ಇದು ಪಟಾಕಿಯಿಂದ ಸಂಭವಿಸಿದ ದುರಂತ ಅಲ್ಲ ಎಂದು ತಿಳಿಸಿದ್ದಾರೆ.

Key words: Mysterious –explosion- case – Bangalore-FSL- team- visit