ರಾಜ್ಯದಲ್ಲಿ ಲಾಕ್ ಡೌನ್ ಪ್ರಶ್ನೆಯೇ ಇಲ್ಲ- ಸಿಎಂ ಬೊಮ್ಮಾಯಿ ಸ್ಪಷ್ಟನೆ.

ದಾವಣಗೆರೆ,ನವೆಂಬರ್,29,2021(www.justkannada.in): ರಾಜ್ಯದಲ್ಲಿ ಲಾಕ್ ಡೌನ್ ಆಗುತ್ತದೆ ಎಂಬ ವದಂತಿಗಳು ಹಬ್ಬಿರುವ ಹಿನ್ನೆಲೆ ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ.

ದಾವಣಗೆರೆಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಸರ್ಕಾರದ ಮುಂದೆ ಲಾಕ್​ಡೌನ್ ಮಾಡುವ ಪ್ರಸ್ತಾವನೆ ಇಲ್ಲ. ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ. ಲಾಕ್ ಡೌನ್ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

 ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಒಬ್ಬರಲ್ಲಿ ನಿಗೂಢ ಸೋಂಕಿನ ಲಕ್ಷಣ ಕಾಣಿಸಿಕೊಂಡಿದೆ. ಐಸಿಎಂಆರ್​ಗೆ ಕಳುಹಿಸಿದ್ದೇವೆ, ವರದಿಗಾಗಿ ಕಾಯುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ಧಾರೆ.

ಒಮಿಕ್ರಾನ್ ಬಗ್ಗೆ ರಾಜ್ಯ ಸರ್ಕಾರ ತುರ್ತು ಕ್ರಮಕೈಗೊಳ್ಳುತ್ತಿದೆ. ಅಲ್ಲದೇ ವಿದೇಶಗಳಿಂದ ಬಂದವರನ್ನ ಪರೀಕ್ಷೆ ಮಾಡಲಾಗಿದೆ. ಕೇರಳದಿಂದ ಬಂದ ಪ್ರತಿಯೊಬ್ಬರಿಗೂ ಟೆಸ್ಟ್​ ಮಾಡಲಾಗ್ತಿದೆ‌. ಒಮಿಕ್ರಾನ್​ ಬಗ್ಗೆ ರಾಜ್ಯದ ಜನ ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೂಸ್ಟರ್ ಡೋಸ್ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಬೇಕು. ಈ ಬಗ್ಗೆ ನಾವು ನಿರ್ಧಾರ‌ ಕೈಗೊಳ್ಳಲು ಆಗಲ್ಲ. ಶಾಲಾ-ಕಾಲೇಜುಗಳಲ್ಲಿ ಕೊವಿಡ್ ಬಗ್ಗೆ ನಿಗಾಗೆ ಸೂಚಿಸಿದ್ದೇವೆ. ಶಾಲಾ- ಕಾಲೇಜುಗಳಿಗೆ ರಜೆ ನೀಡುವ ಅಗತ್ಯವೇ ಇಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದರು.

Key words: mysterious- infection- symptom -someone – South Africa-CM Basavaraj Bommai