ಮೈಸೂರು,ಅಕ್ಟೋಬರ್,21,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಮೈಸೂರು ದಸರಾ ಸಂಭ್ರಮ ಕಳೆಗಟ್ಟಿದ್ದು ಜಂಬೂಸವಾರಿ ಮೆರವಣಿಗೆ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ. ಇದನ್ನೂ ಮುನ್ನ ಸಿಎಂ ಡಿಕೆ ಶಿವಕುಮಾರ್ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದರು.
ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಶುಭ ಮಕರ್ ಲಗ್ನದಲ್ಲಿ ಸಿಎಂ ಡಿಕೆ ಶಿವಕುಮಾರ್ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.
ಈ ವೇಳೆ ಸಚಿವರಾದ ಯತೀಂದ್ರ ಸಿದ್ದರಾಮಯ್ಯ, ಶಿವರಾಜ್ ತಂಗಡಗಿ, ಪರಿಷತ್ ಉಪಸಭಾಪತಿ ಉಮಾಶ್ರೀ ಸಾಥ್ ನೀಡಿದರು. ಸಂಜೆ 4.10ರ ವೇಳೆಗೆ ಜಂಬೂಸವಾರಿ ಮೆರವಣಿಗೆಗೆ ಚಾಲನೆ ದೊರೆಯಲಿದೆ.
Mysuru Dasara, CM DK Shivakumar, offers prayers , Nandi Dhwaja







