ಮೈಸೂರು, ಅ.೧೫, ೨೦೨೬ : ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೃತ್ಯ ಸಾಬೀತಾಗಿದ್ದು, ಶಿಕ್ಷೆ ಪ್ರಮಾಣ ನಾಳೆ ಪ್ರಕಟಿಸುವ ಸಾಧ್ಯತೆ ಇದೆ.
ಕಳೆದ ದಸರಾ ಸಂದರ್ಭದಲ್ಲಿ ನಡೆದ ಈ ಘಟನೆ ನಾಗರಿಕರನ್ನು ಬೆಚ್ಚಿ ಬೀಳಿಸಿತ್ತು. ಬಲೂನು ಮಾರಾಟ ಮಾಡಲು ಮೈಸೂರಿಗೆ ಆಗಮಿಸಿದ್ದ ಅಲೆಮಾರಿ ಕುಟುಂಬ. ಈ ವೇಳೆ ಅಪ್ರಾಪ್ತೆಯ ಮೇಲೆ ಅತ್ಯಚಾರವೆಸಗಿ ಬಳಿಕ ಕೊಲೆ ಮಾಡಲಾಗಿತ್ತು.
ಈ ಸಂಬಂದ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆ (BNS) ಮತ್ತು ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿತ್ತು.

ಇದರ ವಿಚಾರಣೆ ನಗರದ ಪೊಕ್ಸೋ ಕೋರ್ಟ್ ನಲ್ಲಿ ನಡೆಯುತ್ತಿತ್ತು. ಸರಕಾರದ ಪರವಾಗಿ ಸರಕಾರಿ ಅಭಿಯೋಜಕಿ ಕೆ.ಬಿ.ಜಯಂತಿ ಹಾಗೂ ಆರೋಪಿ ಪರ ಜಿಲ್ಲಾ ಕಾನೂನು ಘಟಕದ ಮಾಚಂಗಡ ಎಸ್.ನವೀನ್ ವಾದಿಸಿದ್ದರು.
ದೂರುದಾರರ ಹೇಳಿಕೆಯ ಪ್ರಕಾರ, ಕುಟುಂಬದೊಂದಿಗೆ ವಾಸಿಸುತ್ತಿದ್ದ ಬಾಲಕಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಆಕೆಯನ್ನು ಹುಡುಕಲು ಪ್ರಯತ್ನಿಸಲಾಗಿತ್ತು. ಬಳಿಕ ನಡೆದ ಘಟನೆಗಳ ಕುರಿತು ದೂರಿನಲ್ಲಿ ವಿವರಿಸಲಾಗಿದ್ದು, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಗಂಭೀರ ಆರೋಪವನ್ನು ಮಾಡಲಾಗಿತ್ತು.

ಪ್ರಕರಣದ ವಿವರ:
2025ರ ಅಕ್ಟೋಬರ್ 9ರಂದು ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ಗಳಾದ 137(2), 65(2), 103(1) ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್ಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿತ್ತು.
ಘಟನೆ ನಡೆದ ೨೪ ಗಂಟೆಗಳಲ್ಲಿ ಆರೋಪಿ ಕಾರ್ತಿಕ್ ಅಲಿಯಾಸ್ ಗರಡಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.
ಪೊಕ್ಸೋ ನ್ಯಾಯಾಲಯದ ನ್ಯಾಯಾಧೀಶ ಆನಂದ್ ಪಿ. ಹೂಗಡೆ, ಆರೋಪಿಯ ಪರ ಹಾಗೂ ವಿರುದ್ಧದ ವಾದ ಆಲಿಸಿ ಇಂದು ಅಂತಿಮ ತೀರ್ಪು ನೀಡಿದರು. ಶಿಕ್ಷೆ ಪ್ರಮಾಣ ನಾಳೆ ಪ್ರಕಟಿಸುವ ಸಾಧ್ಯತೆ ಇದೆ.

KEY WORDS:
Mysuru minor girl rape and murder case, Mysuru POCSO court verdict, Minor girl murder case, Mysuru, Mysuru Dasara crime, Nazarbad Police, POCSO Act Mysuru court judgment







