ಮೈಸೂರು,ಅಕ್ಟೋಬರ್,13 , 2020(www.justkannada.in): ಮೈಸೂರು ಡಿಸಿಯಾಗಿ ರೋಹಿಣಿ ಸಿಂಧೂರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಅವಧಿಗೂ ಮುನ್ನ ವರ್ಗಾವಣೆ ಮಾಡಿದ ಸರ್ಕಾರದ ನಿರ್ಧಾರ ಪ್ರಶ್ನಿಸಿ ನಿರ್ಗಮಿತ ಬಿ. ಶರತ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸಿಎಟಿ ನಾಳೆ ಮತ್ತೆ ಕೈಗೆತ್ತಿಕೊಳ್ಳಲಿದೆ.

ಆಗಸ್ಟ್ 29 ರಂದು ಮೈಸೂರು ಜಿಲ್ಲಾಧಿಕಾರಿಯಾಗಿ ಬಿ ಶರತ್ ಅವರನ್ನ ಸರ್ಕಾರ ನೇಮಕ ಮಾಡಿತ್ತು. ಬಳಿಕ ಸೆಪ್ಟಂಬರ್ 29 ರಂದು ದಸರ ಮಹೋತ್ಸವದ ಪೂರ್ವ ಸಿದ್ಧತಾ ಕಾರ್ಯಗಳ ನಡೆವೆಯೂ ಏಕಾಏಕಿ ಬಿ.ಶರತ್ ಅವರನ್ನ ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿ ಅವರನ್ನು ಸೆಪ್ಟಂಬರ್ 29 ರಂದು ಮೈಸೂರು ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿತ್ತು.
ಹೀಗಾಗಿ ಕೇವಲ 30 ದಿನಕ್ಕೆ ವರ್ಗಾವಣೆ ಪ್ರಶ್ನಿಸಿ IAS ಅಧಿಕಾರಿ ಬಿ ಶರತ್ ಸಿಎಟಿಗೆ ಅರ್ಜಿ ಸಲ್ಲಿಸಿದ್ದು ಅ.07 ರಂದು ವಿಡಿಯೋ ಕಾನ್ಪರೇನ್ಸ್ ಮೂಲಕ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ನಾಳೆಗೆ (ಅಕ್ಟೋಬರ್ 14ಕ್ಕೆ) ಮುಂದೂಡಿತ್ತು.

Key words: mysuru-former-dc-b-sharath-transfer-Rohini Sindhuri -appointed-case-CAT-inquiry-on-october-14 th






