ಕಮಲ ಹಿಡಿಯಲು ಸಿದ್ಧರಾದ ಕೊಳ್ಳೇಗಾಲ ಶಾಸಕ ಎನ್.ಮಹೇಶ್

ಬೆಂಗಳೂರು, ಜುಲೈ 18, 2021 (www.justkannada.in): ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಅವರು ಬಿಜೆಪಿಗೆ ಸೇರಲು ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಸಭೆ ಕಾರ್ಯಕರ್ತರ ಗೋಪ್ಯ ಸಭೆಗಳನ್ನು ನಡೆಸುತ್ತಿದ್ದಾರೆ.  ಕೊಳ್ಳೇಗಾಲ ತಾಲ್ಲೂಕಿನ ಕುರುಬನ ಕಟ್ಟೆ ದೇವಸ್ಥಾನದ ಆವರಣದಲ್ಲಿ ಬೆಂಬಲಿಗರು, ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ.

ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಸರ್ಕಾರ ಪತನವಾಗಿ, ಬಿಎಸ್‌ಪಿಯಿಂದ ದೂರವಾದ ನಂತರ ಎನ್‌.ಮಹೇಶ್‌ ಅವರು ಬಿಜೆಪಿ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ. ಅಂದಿನಿಂದಲೇ ಅವರು ಬಿಜೆಪಿ ಸೇರುತ್ತಾರೆ ಎಂಬ ವದಂತಿ ರಾಜಕೀಯ ವಲಯದಲ್ಲಿ ದಟ್ಟವಾಗಿದೆ.  ವಾರದಿಂದೀಚೆಗೆ ಕಾರ್ಯಕರ್ತರ ಹಾಗೂ ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸಲು ಮಹೇಶ್‌ ಅವರು ಸರಣಿ ಸಭೆ ನಡೆಸುತ್ತಿದ್ದಾರೆ.

ಇದೇ 15ರಂದು ಚಾಮರಾಜನಗರ ಮತ್ತು ಗುಂಡ್ಲುಪೇಟೆಗಳಲ್ಲಿ ಸಭೆಗಳನ್ನು ನಡೆಸಿದ್ದಾರೆ. ಶನಿವಾರ ಕೊಳ್ಳೇಗಾಲದಲ್ಲಿ ಕಾರ್ಯಕರ್ತರೊಂದಿಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.