Saturday, August 22, 2026

BDA Apartments

Home Front Page ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದಲ್ಲಿ ನಾದ ಬ್ರಹ್ಮ ಹಂಸಲೇಖ ಚಾಲನೆ

ನಾಡಹಬ್ಬ ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದಲ್ಲಿ ನಾದ ಬ್ರಹ್ಮ ಹಂಸಲೇಖ ಚಾಲನೆ

ಮೈಸೂರು, ಅಕ್ಟೋಬರ್ 15, 2023(www.justkannada.in): ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ಚಾಮುಂಡಿಬೆಟ್ಟದಲ್ಲಿ ನಾದ ಬ್ರಹ್ಮ ಹಂಸಲೇಖ ಚಾಲನೆ ನೀಡಿದರು.

416ನೇ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಬೆಟ್ಟದಲ್ಲಿ ಸಾವಿರಾರು ಭಕ್ತರು ಸಾಕ್ಷಿಯಾದರು. 10:15ರಿಂದ 10.36ರವರೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾಡಹಬ್ಬಕ್ಕೆ ಹಂಸಲೇಖ ಚಾಲನೆ ನೀಡಿದರು.

ನಾಡ ದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರೆಗೆ ವಿದ್ಯುಕ್ತ ಚಾಲನೆ ನೀಡಲಾಯಿತು.

ಸಿಎಂ ಸಿದ್ದರಾಮಯ್ಯಮ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ್ ತಂಗಡಗಿ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.