ನೂತನ ಸಿಎಂ ಬೊಮ್ಮಾಯಿಗೆ ‘ಚಮಚ’ ಸಲಹೆ ನೀಡಿದ ನಾಗತಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಜುಲೈ 31, 2021 (www.justkannada.in): ಚಮಚಗಳನ್ನು ದೂರವಿಟ್ಟು ಕೆಲಸ ಮಾಡಿ ಎಂದು ನೂತನ ಸಿಎಂಗೆ ನಾಗತಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದ್ದಾರೆ.

ಲೋ ಕಮ್ಯಾಂಡ್ ಹಂಗು ಮೀರಿ ಅದ್ಭುತ ಕೆಲಸಮಾಡಿ. ಚಮಚಗಳನ್ನು ದೂರವಿಟ್ಟು ಕೆಲಸ ಮಾಡಿ ಎಂದು ಚಂದ್ರಶೇಖರ್ ಮನವಿ ಮಾಡಿದ್ದಾರೆ.

ಜೊತೆಗೆ ಬಸವರಾಜ ಬೊಮ್ಮಾಯಿ ಅವರ ಮನುಷ್ಯ ಪ್ರೀತಿ, ಸಾಹಿತ್ಯ ಪ್ರೀತಿ, ಪ್ರಾಣಿ ಪ್ರೀತಿಗೆ ಫಿದಾ ಆಗಿದ್ದಾರೆ. ಅಲ್ಲದೆ ತಾವು ನನ್ನಂಥವರಿಗೆ ಆಸೆ ಹುಟ್ಟಿಸಿದ್ದೀರಿ ಎಂದು ಚಂದ್ರಶೇಖರ್ ಹೇಳಿದ್ದಾರೆ.

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸಿನಿಮಾ ವಿಚಾರಕ್ಕೆ ಬರುವುದಾದರೆ ಕೊನೆಯದಾಗಿ ಇಂಡಿಯ ವರ್ಸಸ್ ಇಂಗ್ಲೆಡ್ ಸಿನಿಮಾ ನಿರ್ದೇಶನ ಮಾಡಿದ್ದರು. ಚಿತ್ರದಲ್ಲಿ ವಸಿಷ್ಠ ಸಿಂಹ ಮತ್ತು ಮಾನ್ವಿತಾ ಕಾಮತ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಬೊಮ್ಮಾಯಿ ಕುಟುಂಬದ ಜೊತೆ ಉತ್ತಮ ಸ್ನೇಹ ಸಂಬಂಧ ಹೊಂದಿರುವ ಕಿಚ್ಚ ಒಳ್ಳೆಯದಾಗಲಿ ಮಾಮಾ ಎಂದು ಕಿಚ್ಚ ಸುದೀಪ್ ಕೂಡ ವಿಶ್ ಮಾಡಿದ್ದರು.