ವಿಧಾನಪರಿಷತ್ ಗೆ ಬಿವೈ ವಿಜಯೇಂದ್ರ ಹೆಸರು..?

 

ಬೆಂಗಳೂರು,ಮೇ,14,2022(www.juskannada.in):  ಮಾಜಿಸಿಎಂ  ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ  ಬಿ.ವೈ. ವಿಜಯೇಂದ್ರ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ  ಮಾಡಲು ಬಿಜೆಪಿ ಕೋರ್ ಕಮಿಟಿಯಲ್ಲಿ  ನಿರ್ಧರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ , ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ವಿಜಯೇಂದ್ರ ಅವರ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲು ನಿರ್ಧಾರ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ವಿಧಾನಸಭೆಯಿಂದ ವಿಧಾನ ಪರಿಷತ್ತಿನ 4 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕೋರ್ ಕಮಿಟಿ ಸಭೆಯಲ್ಲಿ ಅಂತಿಮಗೊಳಿಸಲಾಗಿದೆ. ಬಿ.ವೈ. ವಿಜಯೇಂದ್ರ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

ಕೋರ್ ಕಮಿಟಿ ಸಭೆಯಲ್ಲಿ ಬಿ.ವೈ. ವಿಜಯೇಂದ್ರ ಅವರ ಹೆಸರನ್ನು ಮಾಜಿ ಸಿಎಂ  ಬಿ.ಎಸ್. ಯಡಿಯೂರಪ್ಪ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ.  ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾವು ಹೆಸರು ಕಳುಹಿಸುತ್ತೇವೆ, ಮೇಲಿನವರು ತೀರ್ಮಾನ ಮಾಡುತ್ತಾರೆ ಎಂದರು ಎನ್ನಲಾಗಿದೆ.

Key words: Name – BY Vijayendra –legislative council