Thursday, August 13, 2026

BDA Apartments

Home Front Page ಹೆಸರು ಮಾತ್ರ ನಮ್ದು: ಸರ್ಕಾರ ಅವರದ್ದು- ಮತ್ತೆ ಅಸಮಾಧಾನ ಹೊರ ಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್…

ಹೆಸರು ಮಾತ್ರ ನಮ್ದು: ಸರ್ಕಾರ ಅವರದ್ದು- ಮತ್ತೆ ಅಸಮಾಧಾನ ಹೊರ ಹಾಕಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್…

ಬೆಂಗಳೂರು,ಮೇ,13,2019(www.justkannada.in):  ಸಿದ್ದರಾಮಯ್ಯ ಮತ್ತೆ ಸಿಎಂ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದ ಕೈ ಮುಖಂಡರ ವಿರುದ್ದ ವಾಗ್ದಾಳಿ ನಡೆಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್  ಇದೀಗ ಮತ್ತೆ ಕಾಂಗ್ರೆಸ್ ವಿರುದ್ದ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಸಿದ್ದರಾಮಯ್ಯ ಮಾಡಿದ್ದ ಟ್ವಿಟ್ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ರಾಜ್ಯದಲ್ಲಿ ಕಾಂಗ್ರೆಸ್ ನವರೇ ಎಲ್ಲಾ ಅಧಿಕಾರ ನಡೆಸುತ್ತಿದ್ದಾರೆ. ಅವರು ಹೇಳಿದಂತೆ ಸರ್ಕಾರ ನಡೆಯುತ್ತಿದೆ. ಅವರೇ ಸಚಿವರಾಗಿದ್ದಾರೆ. ಅಧಿಕಾರಿಗಳಿದ್ದಾರೆ  ಹೆಸರು ಮಾತ್ರ ನಮ್ಮದು ಆದರೇ ಸರ್ಕಾರ ಅವರದ್ದು ಎಂದು ಹೇಳಿದರು.

ಸಿದ್ದರಾಮಯ್ಯ ವಿರುದ್ದದ ಹೇಳಿಕೆ ಕುರಿತು ಮಾತನಾಡಿದ ಹೆಚ್.ವಿಶ್ವನಾಥ್, ನಾನು ಹೊಟ್ಟೆಕಿಚ್ಚಿನಿಂದ  ಹೇಳಿಕೆ ನೀಡಿಲ್ಲ. ಧರಂ ಸಿಂಗ್ ಸಿಎಂ ಆಗಿದ್ದಾಗಲೂ ಸಿದ್ದರಾಮಯ್ಯ ಅವರ ಬೆಂಬಲಿಗರೂ ಇದೇ ರೀತಿ ಹೇಳಿಕೆ ನೀಡುತ್ತಿದ್ದರು. ಆಗ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದರು. ಈಗಲೂ ಸಹ ಅದೇ ರೀತಿ ಹೇಳಿಕೆ ನೀಡುತ್ತಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಒಬ್ಬ ಸಿಎಂ ಇದ್ದಾರೆ. ಆದರೂ ಸಿದ್ದರಾಮಯ್ಯ ಮತ್ತೆ ಸಿಎಂ ಬಗ್ಗೆ ಹೇಳಿಕೆ ನೀಡುತ್ತಾರೆ. ನನ್ನ ಹೇಳಿಕೆಯಿಂದ ಖುಷಿ ಆಗುತ್ತೋ ಇಲ್ಲವೋ ಗೊತ್ತಿಲ್ಲ. ನಾನು ವಾಸ್ತವವಾಗಿ ಮಾತನಾಡುತ್ತೇನೆ. ಜನ ಅವಕಾಶ ನೀಡಿದರೇ ಅವರು ಮತ್ತೆ ಸಿಎಂ ಆಗಲಿ ಎಂದು ನುಡಿದರು.

Key words: Name-our- government-congress-  JDS president- HVishwanath