ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ: ಗ್ರಾಹಕರ ಆಕ್ರೋಶ

ಮೈಸೂರು, ಜುಲೈ 09, 2023 (www.justkannada.in): ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್ ಚಿಂತನೆ ನಡೆಸಿದೆ.

ಇದರ ಬೆನ್ನಲ್ಲೆ ಹಾಲು ಮಾರಾಟದ ದರ ಹೆಚ್ಚಳಕ್ಕೆ ಒಕ್ಕೂಟಗಳು ನಿರ್ಧಾರ ಮಾಡಿವೆ. ಹೀಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.

ರೈತರಿಗೆ ಆಗುತ್ತಿರುವ ನಷ್ಟ ತುಂಬಲು ಹಾಲಿನ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಒಕ್ಕೂಟಗಳ ಮನವಿ ಮಾಡಲು ನಿರ್ಧರಿಸಿವೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತ ಜನಸಾಮಾನ್ಯರು ಇದು ಮತ್ತಷ್ಟು ಹೊರೆ ನೀಡಲಿದೆ.

ಮತ್ತೆ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆಯಲು ಕೆಎಂಎಫ್ ಮುಂದಾಗಿರುವುದಕ್ಕೆ ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಪ್ರೋತ್ಸಾಹ ಧನ ಕೊಡಲು ಗ್ರಾಹಕರ ಜೇಬಿಗೆ ಕತ್ತರಿ ಹಾಕುಲು ಒಕ್ಕೂಟಗಳು ಮುಂದಾಗಿವೆ. ಇತ್ತೀಚೆಗಷ್ಟೇ ಹಾಲಿನ ದರ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಹೆಚ್ವಳ ಮಾಡಿದರೆ ಜನ ಸಾಮನ್ಯರು ಜೀವ ಮಾಡುವುದಾದರು ಹೇಗೆ? ಎಂದು  ಗ್ರಾಹಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಈಗಾಗಲೇ ಎಲ್ಲಾ ಪದಾರ್ಥಗಳ ಬೆಲೆ ಹೆಚ್ಚಾಗಿ ಬಡ,ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ. ಈಗ ಮತ್ತೆ ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಮಾಡಿದರೆ ಬಹಳ ಕಷ್ಟವಾಗುತ್ತದೆ ಎಂದು ಹಾಲಿನ ದರ ಏರಿಕೆ ಖಂಡಿಸಿ ಗ್ರಾಹಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.